ಮುಂಬೈ:ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಎರಡನೇ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಶಿವಸೇನೆ ಪಕ್ಷಕ್ಕೆ ಸರ್ಕಾರ ರಚನೆ ಮಾಡುವಂತೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಆಹ್ವಾನ ನೀಡಿದ್ದಾರೆ.
ಜನಾದೇಶ ಇಲ್ಲವೆಂದು ರಾಜ್ಯಪಾಲರು ನೀಡಿದ್ದ ಆಹ್ವಾನವನ್ನ ಬಿಜೆಪಿ ತಿರಸ್ಕರಿಸಿದ ಬೆನ್ನಲ್ಲೇ ಸರ್ಕಾರ ರಚಿಸುವಂತೆ ಶಿವಸೇನೆಗೆ ರಾಜ್ಯಪಾಲರು ಆಹ್ವಾನ ನೀಡಿದ್ದಾರೆ. ನಿನ್ನೆಯಷ್ಟೇ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಚುನಾವಣೆಯಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿಗೆ ಸರ್ಕಾರ ರಚನೆ ಮಾಡುವಂತೆ ಆಹ್ವಾನ ನೀಡಿದ್ದರು. ಇಂದು ಸಂಜೆ ರಾಜ್ಯಪಾಲರನ್ನ ಭೇಟಿ ಮಾಡಿದ್ದ ಬಿಜೆಪಿ ನಾಯಕರು, ಸರ್ಕಾರ ರಚನೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.