ನವದೆಹಲಿ:ಲಾಕ್ಡೌನ್ ಹಿನ್ನೆಲೆಯಲ್ಲಿ ಮನೆಗೆ ವಾಪಸ್ ಆಗಿರುವ ವಲಸೆ ಕಾರ್ಮಿಕರಿಗೆ ಉದ್ಯೋಗ ಒದಗಿಸಲು ಸಹಾಯ ಮಾಡುವುದಕ್ಕಾಗಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಹೆಚ್ಚುವರಿ 40,000 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ.
ನರೇಗಾ ಯೋಜನೆಗೆ 40,000 ಕೋಟಿ ರೂಪಾಯಿ ಘೋಷಣೆ
ಆರ್ಥಿಕ ಉತ್ತೇಜನ ಪ್ಯಾಕೇಜ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಹೆಚ್ಚುವರಿ 40,000 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ.
ಮನ್ರೇಗಾ ಯೋಜನೆಗೆ 40,000 ಕೋಟಿ ರೂಪಾಯಿ ಘೋಷಣೆ
ಆರ್ಥಿಕ ಉತ್ತೇಜನ ಪ್ಯಾಕೇಜ್‌ನ ಐದನೇ ಮತ್ತು ಅಂತಿಮ ಘೋಷಣೆ ವೇಳೆ ಪ್ರಕಟಿಸಿದ ವಿತ್ತ ಸಚಿವ ನಿರ್ಮಲಾ ಸೀತಾರಾಮನ್, MGNREGS ಯೋಜನೆಗೆ ಈ ಹಿಂದಿನ ಬಜೆಟ್ನಲ್ಲಿ61,000 ಕೋಟಿ ಘೋಷಣೆ ಮಾಡಲಾಗಿತ್ತು. ಇದೀಗದ ಹೆಚ್ಚುವರಿ 40,000 ಕೋಟಿ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಆರೋಗ್ಯಕ್ಕಾಗಿ ಸಾರ್ವಜನಿಕ ವೆಚ್ಚವನ್ನು ಹೆಚ್ಚಿಸಲಾಗುವುದು ಎಂದು ಹೇಳಿದ ಸಚಿವರು ಈ ಬಗ್ಗೆ ಹೆಚ್ಚಿನ ವಿವರ ನೀಡಲಿಲ್ಲ. ಅಲ್ಲದೆ ತಳಮಟ್ಟದ ಆರೋಗ್ಯ ಸಂಸ್ಥೆಗಳಲ್ಲಿ ಹೂಡಿಕೆಗಳನ್ನು ಹೆಚ್ಚಿಸಬೇಕು ಎಂದಿದ್ದಾರೆ.