ನವದೆಹಲಿ: ದೇಶದಲ್ಲಿ ಜಾರಿಗೊಳಿಸಲು ನಿರ್ಧರಿಸಲಾಗಿರುವ ಕೃಷಿ ಮಸೂದೆಗಳಿಗೆ ಕೆಲವೊಂದು ರಾಜ್ಯಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಪಂಜಾಬ್, ಹರಿಯಾಣಗಳಲ್ಲಿ ರೈತರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಮಧ್ಯೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಹೊರಹಾಕಿದೆ.
ಈಗಾಗಲೇ ಜಾರಿಯಲ್ಲಿರುವ ವಿವಿಧ ಯೋಜನೆಗಳ ಪ್ರಕಾರ ಸರ್ಕಾರ ರೈತರಿಂದ ಕನಿಷ್ಠ ಬೆಂಬಲ ಬೆಲೆಗೆ(ಎಂಎಸ್ಪಿ) ಬೆಳೆ ಖರೀದಿ ಮುಂದುವರೆಸಿದೆ ಎಂದು ತಿಳಿಸಿದೆ. ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಮತ್ತು ಹರಿಯಾಣದಲ್ಲಿ ಕೆಎಂಎಸ್ 2020-21ರಲ್ಲಿ 14.09 ಎಲ್ಎಂಟಿ ದ್ವಿದಳ ಧಾನ್ಯಗಳು ಮತ್ತು ಎಣ್ಣೆಕಾಳು ಖರೀದಿಸಲು ಅನುಮೋದನೆ ನೀಡಲಾಗಿದೆ ಎಂಬ ಮಾಹಿತಿ ನೀಡಿದೆ.