ನವದೆಹಲಿ: ದೇಶ ಲಾಕ್ಡೌನ್ ಆಗಿದ್ದು, ಈ ಸಂದರ್ಭದಲ್ಲಿ ಅವಶ್ಯಕವಲ್ಲದ ವಸ್ತುಗಳನ್ನು ಇ-ಕಾಮರ್ಸ್ ಪ್ಲಾಟ್ಫಾರಂಗಳ ಮೂಲಕ ಮಾರಾಟ ಮಾಡುವುದನ್ನು ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದೆ.
ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಆದೇಶ ಹೊರಡಿಸಿದ್ದಾರೆ. ಲಾಕ್ಡೌನ್ ವೇಳೆಯಲ್ಲಿ ಯಾವೆಲ್ಲಾ ವಸ್ತುಗಳ ಸೇವೆ ಅಗತ್ಯ ಎಂದು ಪರಿಷ್ಕೃತ ಪಟ್ಟಿ ತಯಾರಿಸಿ ಈ ಆದೇಶ ಹೊರಡಿಸಲಾಗಿದೆ.