ಅಮರಾವತಿ: ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ ವಿಷಾನಿಲ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರ್ಕಾರ ತಕ್ಷಣವೇ 30 ಕೋಟಿ ರೂ ರಿಲೀಸ್ ಮಾಡಿದ್ದು, ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನಡೆದುಕೊಂಡಿದ್ದಾರೆ.
ನಿನ್ನೆ ನಡೆದ ವಿಷಾನಿಲ ಸ್ಫೋಟ ಘಟನೆಯಲ್ಲಿ 12 ಜನರು ಸಾವನ್ನಪ್ಪಿ, 300ಕ್ಕೂ ಅಧಿಕ ಜನರು ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸ್ಫೋಟದಲ್ಲಿ ಕೆಲವರು ಸಣ್ಣಪುಟ್ಟದಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ತಂದನಂತರ ಆಸ್ಪತ್ರೆಗೆ ತೆರಳಿದ್ದ ಮುಖ್ಯಮಂತ್ರಿ ಜಗನ್ ಮೋಹನ್ರೆಡ್ಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು.
ಈ ವೇಳೆ ಮೃತರ ಕುಟುಂಬಕ್ಕೆ 1 ಕೋಟಿ ರೂ, ಗಂಭೀರವಾಗಿ ಗಾಯಗೊಂಡು ವೆಟಿಲೆಂಟರ್ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವವರಿಗೆ 10 ಲಕ್ಷ, ಎರಡು-ಮೂರು ದಿನದಲ್ಲಿ ಡಿಸ್ಚಾರ್ಜ್ ಆಗುವವರಿಗೆ 1 ಲಕ್ಷ ಹಾಗೂ ಸಣ್ಣ-ಪುಟ್ಟ ಗಾಯಗಳಾದವರಿಗೆ 25 ಸಾವಿರ ರೂ ನೀಡುವುದಾಗಿ ಘೋಷಿಸಿದರು. ಇನ್ನು ಘಟನೆಯಿಂದ ಬಾಧಿತ ಎಲ್ಲ ಕುಟುಂಬಗಳಿಗೆ 10 ಸಾವಿರ ರೂ ನೀಡುವುದಾಗಿ ಹೇಳಿದ್ದರು. ಜತೆಗೆ ಮೃತರ ಕುಟುಂಬದಲ್ಲಿ ಒಬ್ಬರಿಗೆ ಕೆಲಸ ಕೊಡಿಸುವ ಭರವಸೆ ಸಹ ನೀಡಿದ್ದರು.