ಕರ್ನಾಟಕ

karnataka

ETV Bharat / bharat

ಹೊಸ ಶಿಕ್ಷಣ ನೀತಿಗೆ ಮುಂದಾದ ಕೇಂದ್ರ: ಏನೆಲ್ಲಾ ಬದಲಾವಣೆ? ಎಷ್ಟು ಹಣ ಮೀಸಲು?

ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿ ತರುವ ಕಾರಣ ಬಾಹ್ಯ ವಾಣಿಜ್ಯ ಸಾಲ ಮತ್ತು ಎಫ್‌ಡಿಐ ಆಕರ್ಷಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಹೇಳಿದರು.

ಹೊಸ ಶಿಕ್ಷಣ ನೀತಿಗೆ ಮುಂದಾದ ಕೇಂದ್ರ,  Govt to bring new education policy; allocates Rs 99,300 cr for sector in FY21
ಹೊಸ ಶಿಕ್ಷಣ ನೀತಿಗೆ ಮುಂದಾದ ಕೇಂದ್ರ

By

Published : Feb 1, 2020, 12:43 PM IST

Updated : Feb 1, 2020, 1:13 PM IST

ನವದೆಹಲಿ: ಕೇಂದ್ರವು ಶೀಘ್ರದಲ್ಲೇ ಹೊಸ ಶಿಕ್ಷಣ ನೀತಿಯನ್ನು ಪ್ರಕಟಿಸಲಿದ್ದು, ಈ ಹಿನ್ನೆಲೆ ಸರ್ಕಾರಕ್ಕೆ 2 ಲಕ್ಷಕ್ಕೂ ಅಧಿಕ ಸಲಹೆಗಳು ಬಂದಿವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಈ ಸಾಲಿನ ಬಜೆಟ್​ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ 99,300 ಕೋಟಿ ಹಾಗೂ ಮುಂದಿನ ಹಣಕಾಸು ವರ್ಷದಲ್ಲಿ ಕೌಶಲ್ಯ ಅಭಿವೃದ್ಧಿಗಾಗಿ 3,000 ಕೋಟಿ ರೂ.ನೀಡಲಾಗಿದೆ ಎಂದರು.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಶಿಕ್ಷಣ ಕ್ಷೇತ್ರದಲ್ಲಿ ಬಾಹ್ಯ ವಾಣಿಜ್ಯ ಸಾಲ ಮತ್ತು ಎಫ್‌ಡಿಐ ಆಕರ್ಷಿಸಲು ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಯುವ ಎಂಜಿನಿಯರ್‌ಗಳಿಗೆ ಇಂಟರ್ನ್‌ಶಿಪ್‌ಗೆ ಅವಕಾಶಗಳನ್ನು ಒದಗಿಸುವ ಉದ್ದೇಶದಿಂದ ನಗರ ಸ್ಥಳೀಯ ಸಂಸ್ಥೆಗಳಿಗೆ ಕಾರ್ಯಕ್ರಮವನ್ನು ಆಯೋಜಿಸಲು ಸರ್ಕಾರ ಯೋಜಿಸಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಪೊಲೀಸ್ ವಿವಿ ಮತ್ತು ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಬಗ್ಗೆ ಪ್ರಸ್ತಾಪಿಸಿದ ಅವರು, ಟಾಪ್ 100 ಸ್ಥಾನದಲ್ಲಿರುವ ಸಂಸ್ಥೆಗಳಿಂದ ಪದವಿ ಮಟ್ಟದ ಪೂರ್ಣ ಪ್ರಮಾಣದ ಆನ್‌ಲೈನ್ ಶಿಕ್ಷಣ ಕಾರ್ಯಕ್ರಮವನ್ನು ಅನುಮತಿಸಲು ನಿರ್ಧರಿಸಲಾಗಿದೆ ಎಂದರು.

ವೈದ್ಯರ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಪಿಪಿಪಿ (ಸಾರ್ವಜನಿಕ, ಖಾಸಗಿ ಸಹಭಾಗಿತ್ವ) ಮಾದರಿಯಲ್ಲಿ ಜಿಲ್ಲಾ ಆಸ್ಪತ್ರೆಗಳೊಂದಿಗೆ ವೈದ್ಯಕೀಯ ಕಾಲೇಜುಗಳನ್ನು ಜೋಡಿಸಲಾಗುತ್ತದೆ. ಶಿಕ್ಷಕರು, ದಾದಿಯರು, ಪ್ಯಾರಾ ವೈದ್ಯಕೀಯ ಸಿಬ್ಬಂದಿ, ಆರೈಕೆದಾರರಿಗಾಗಿ ವಿಶೇಷ ಬ್ರಿಡ್ಜ್​ ಕೋರ್ಸ್‌ಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.

Last Updated : Feb 1, 2020, 1:13 PM IST

ABOUT THE AUTHOR

...view details