ಕರ್ನಾಟಕ

karnataka

ETV Bharat / bharat

ಹೈದರಾಬಾದ್ ಪಾಲಿಕೆ ಚುನಾವಣೆ ಫಲಿತಾಂಶ: ಯಾರಿಗೆ ಸಿಗಲಿದೆ ಮುತ್ತಿನ ನಗರಿ ಅಧಿಕಾರ? - ಹೈದರಾಬಾದ್ ಪಾಲಿಕೆ ಫಲಿತಾಂಶ

ಇಂದು ಗ್ರೇಟರ್‌ ಹೈದರಾಬಾದ್‌ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, 30 ಸ್ಥಳಗಳಲ್ಲಿ ಮತ ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

Greater Hyderabad Municipal Council election results
ಹೈದರಾಬಾದ್ ಪಾಲಿಕೆ ಚುನಾವಣೆ ಫಲಿತಾಂಶ

By

Published : Dec 4, 2020, 3:44 AM IST

ಹೈದರಾಬಾದ್:ಇಂದು ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯಲಿದ್ದು, 1,122 ಅಭ್ಯರ್ಥಿಗಳ ಭವಿಷ್ಯ ಪ್ರಕಟವಾಗಲಿದೆ.

ಬೆಳಗ್ಗೆ 8 ಗಂಟೆಗೆ ಪ್ರಾರಂಭವಾಗುವ ಎಣಿಕೆ ಪ್ರಕ್ರಿಯೆಗೆ ವಿಸ್ತಾರವಾದ ವ್ಯವಸ್ಥೆ ಮಾಡಲಾಗಿದೆ. 30 ಸ್ಥಳಗಳಲ್ಲಿ ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಒಟ್ಟು 8,152 ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪ್ರತಿ ಎಣಿಕೆಯ ಟೇಬಲ್‌ನಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿ ಸಂಪೂರ್ಣ ಎಣಿಕೆ ಪ್ರಕ್ರಿಯೆಯನ್ನು ದಾಖಲಿಸಲಾಗುವುದು ಎಂದು ಹೇಳಿದ್ದಾರೆ. ಮತದಾನಕ್ಕಾಗಿ ಮತಪತ್ರಗಳನ್ನು ಬಳಸಲಾಗಿದ್ದು, ಸಂಜೆ ಅಥವಾ ರಾತ್ರಿಯಲ್ಲಿ ಸಂಪೂರ್ಣ ಫಲಿತಾಂಶ ಹೊರ ಬೀಳುವ ಸಾಧ್ಯತೆ ಇದೆ.

ಹಿಂದೆಂದೂ ಕಂಡು ಕೇಳರಿಯದ ಪ್ರಚಾರಕ್ಕೆ ಸಾಕ್ಷಿಯಾದ ಹೈದರಾಬಾದ್‌ ಮಹಾನಗರ ಪಾಲಿಕೆಯ ಗದ್ದುಗೆ ಯಾರ ಪಾಲಾಗಲಿದೆ ಎಂಬ ಪ್ರಶ್ನೆಗೆ ಇಂದು ಉತ್ತರ ದೊರೆಯಲಿದೆ.

ಡಿಸೆಂಬರ್ 1 ರಂದು 150 ವಾರ್ಡ್​ಗಳಿಗೆ ನಡೆದ ಚುನಾವಣೆಯಲ್ಲಿ, ಒಟ್ಟು 74.67 ಲಕ್ಷ ಮತದಾರರ ಪೈಕಿ ಶೇ. 46.55 (34.50 ಲಕ್ಷ) ರಷ್ಟು ಜನರು ತಮ್ಮ ಹಕ್ಕು ಚಲಾಯಿಸಿದ್ದರು.

ABOUT THE AUTHOR

...view details