ಖೇಡಾ(ಗುಜರಾತ್): ಮೂರು ಅಂತಸ್ತಿನ ಕಟ್ಟಡ ಕುಸಿದುಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಗುಜರಾತ್ನಲ್ಲಿ ನಡೆದಿದೆ.
ಭಾರಿ ಮಳೆಯಿಂದ ಮೂರು ಅಂತಸ್ತಿನ ಕಟ್ಟಡ ಕುಸಿತ.. ನಾಲ್ವರ ಸಾವು - ಗುಜರಾತ್
ಗುಜರಾತ್ನಲ್ಲಿ ಭಾರಿ ಮಳೆಯಿಂದ ಮೂರು ಅಂತಸ್ತಿನ ಕಟ್ಟಡ ಕುಸಿದುಬಿದ್ದು 4 ಮಂದಿ ಸಾವಿಗೀಡಾಗಿದ್ದಾರೆ.
ಮೂರು ಅಂತಸ್ತಿನ ಕಟ್ಟಡ ಕುಸಿತ
ಗುಜರಾತ್ನ ಖೇಡಾ ಜಿಲ್ಲೆಯ ಪ್ರಗತಿನಗರದಲ್ಲಿ ಈ ದುರ್ಘಟನೆ ನಡೆದಿದ್ದು, ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈವರೆಗೆ 4 ರಿಂದ 5 ಜನರನ್ನ ರಕ್ಷಣೆ ಮಾಡಲಾಗಿದೆ. ಭಾರಿ ಮಳೆಯಿಂದ ಕಟ್ಟಡ ಕುಸಿದಿದೆ ಎಂದು ಹೇಳಲಾಗುತ್ತಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.