ಕರ್ನಾಟಕ

karnataka

ETV Bharat / bharat

ಗುಜರಾತ್​ನ ಮಾಜಿ ಐಎಎಸ್ ಅಧಿಕಾರಿ ಬಿಜೆಪಿಗೆ - ಲಕ್ನೋ

ಉತ್ತರ ಪ್ರದೇಶದ ಮೌ ಜಿಲ್ಲೆಯ 1988 ರ ಬ್ಯಾಚ್ ಅಧಿಕಾರಿಯಾಗಿದ್ದ ಕೆ. ಶರ್ಮಾ, ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ 20 ವರ್ಷಗಳಿಂದ ನಿಕಟವಾಗಿ ಸಂಪರ್ಕದಲ್ಲಿದ್ದಾರೆ.

gujarat-cadre-ias-officer-joins-bjp
ಗುಜರಾತ್​ನ ಮಾಜಿ ಐಎಎಸ್ ಅಧಿಕಾರಿ ಬಿಜೆಪಿಗೆ

By

Published : Jan 15, 2021, 3:30 AM IST

ಲಕ್ನೋ: ಇತ್ತೀಚೆಗಷ್ಟೇ ಸೇವೆಯಿಂದ ಸ್ವಯಂಪ್ರೇರಿತ ನಿವೃತ್ತಿ ಪಡೆದಿದ್ದ ಗುಜರಾತ್ ಕೇಡರ್ ಐಎಎಸ್ ಅಧಿಕಾರಿ ಎ ಕೆ ಶರ್ಮಾ ಬಿಜೆಪಿಗೆ ಸೇರಿಕೊಂಡಿದ್ದಾರೆ.

ಉತ್ತರ ಪ್ರದೇಶದ ಮೌ ಜಿಲ್ಲೆಯ 1988 ರ ಬ್ಯಾಚ್ ಅಧಿಕಾರಿಯಾಗಿದ್ದ ಕೆ. ಶರ್ಮಾ, ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ 20 ವರ್ಷಗಳಿಂದ ನಿಕಟವಾಗಿ ಸಂಪರ್ಕದಲ್ಲಿದ್ದಾರೆ. ಈ ಹಿನ್ನೆಲೆ ಇವರಿಗೆ ಸಂಪುಟದಲ್ಲಿ ಅವಕಾಶ ಕಲ್ಪಿಸಬಹುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್​ ಸಿಂಗ್​, ಐಎಎಸ್ ಮಾಜಿ ಅಧಿಕಾರಿ ಅರವಿಂದ್ ಕುಮಾರ್ ಶರ್ಮಾ ಅವರನ್ನು ಬಿಜೆಪಿ ಕುಟುಂಬದಿಂದ ಸ್ವಾಗತಿಸಲಾಯಿತು. ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಸಿದ್ಧಾಂತದೊಂದಿಗೆ ಸಂಬಂಧ ಹೊಂದಿರುವ ಶರ್ಮಾ ಅವರ ಸಾಮರ್ಥ್ಯಗಳು ಮತ್ತು ಸಮರ್ಪಣೆಯೊಂದಿಗೆ ಪಕ್ಷವು ಖಂಡಿತವಾಗಿಯೂ ಹೊಸ ರೂಪವನ್ನು ಪಡೆಯುತ್ತದೆ ಎಂದು ಟ್ವೀಟ್​ ಮಾಡಿದ್ದಾರೆ.

ಈಟಿವಿ ಭಾರತದೊಂದಿಗೆ ಮಾತನಾಡಿದ ಶರ್ಮಾ, ನಾನು ಯಾವುದೇ ರಾಜಕೀಯ ಕುಟುಂಬಕ್ಕೆ ಸೇರಿದವನಲ್ಲ. ಪಿಎಂ ಮೋದಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಪಕ್ಷದ ಕಲ್ಯಾಣಕ್ಕಾಗಿ ನಾನು ಕೆಲಸ ಮಾಡುತ್ತೇನೆ ಎಂದರು.

ABOUT THE AUTHOR

...view details