ಭರೂಚ್(ಗುಜರಾತ್):ಕೇವಲ 25 ವರ್ಷದ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ನಿಗೂಢವಾಗಿ ಆತ್ಮಹತ್ಯೆಗೆ ಶರಣಾಗಿದ್ದು, ಯಾವ ಕಾರಣಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾಳೆ ಎಂಬ ಮಾಹಿತಿ ಇಲ್ಲಿಯವರೆಗೆ ಲಭ್ಯವಾಗಿಲ್ಲ.
ಆತ್ಮಹತ್ಯೆಗೆ ಶರಣಾದ 25 ವರ್ಷದ ಮಹಿಳಾ ಪೊಲೀಸ್ ಕಾನ್ಸ್ಟೇಬಲ್... ಕಾರಣ ನಿಗೂಢ! - ಪೊಲೀಸ್ ಕಾನ್ಸ್ಟೇಬಲ್
ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುಜರಾತ್ನಲ್ಲಿ ನಡೆದಿದೆ.

Lady constable commits suicide
ಗುಜರಾತ್ನ ಭರೂಚ್ನಲ್ಲಿರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ 25 ವರ್ಷದ ದೀಪಿಕಾ ಪರ್ಮಾರ್ ಆತ್ಮಹತ್ಯೆಗೆ ಶರಣಾಗಿರುವ ಪೊಲೀಸ್ ಕಾನ್ಸ್ಟೇಬಲ್. ತನ್ನ ರೂಂನಲ್ಲಿರುವ ಫ್ಯಾನ್ಗೆ ನೇಣು ಬಿಗಿದುಕೊಂಡು ಮಂಗಳವಾರ ರಾತ್ರಿ ಸೂಸೈಡ್ ಮಾಡಿಕೊಂಡಿದ್ದಾಳೆ.
ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂಬುದರ ಮಾಹಿತಿ ಇಲ್ಲಿಯವರೆಗೆ ಲಭ್ಯವಾಗಿಲ್ಲ. ಮೃತದೇಹ ಕುಟುಂಬಸ್ಥರಿಗೆ ನೀಡಲಾಗಿದ್ದು, ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.