ಗಾಂಧಿನಗರ:ಹಿಂದುಳಿದ ವರ್ಗಗಳ ಯುವ ನೇತಾರ,ಶಾಸಕ ಅಲ್ಪೇಶ್ ಠಾಕೂರ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆಗೂ ಒಂದು ದಿನ ಮುಂಚಿತವಾಗಿ ಈ ನಿರ್ಧಾರ ತೆಗೆದುಕೊಂಡಿರುವುದು ಕಾಂಗ್ರೆಸ್ ಪಕ್ಷಕ್ಕೆ ಬಹುದೊಡ್ಡ ಹೊಡೆತ ಬಿದ್ದಂತಾಗಿದೆ.
ಗುಜರಾತ್ನಲ್ಲಿ ಕಾಂಗ್ರೆಸ್ಗೆ ಬಿಗ್ ಶಾಕ್... ಎಂಎಲ್ಎ ಅಲ್ಫೇಶ್ ಠಾಕೂರ್ ಜತೆ ಇಬ್ಬರು ಶಾಸಕರು ಗುಡ್ಬೈ!
ಕೋಲಿ ಠಾಕೂರ್ ಸಮುದಾಯಕ್ಕೆ ಸೇರಿದ ಅಲ್ಪೇಶ್ ಠಾಕೂರ್ ಅವರು 2017ರ ಅಕ್ಟೋಬರ್ ತಿಂಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.
ಕೋಲಿ ಠಾಕೂರ್ ಸಮುದಾಯಕ್ಕೆ ಸೇರಿದ ಅಲ್ಪೇಶ್ ಠಾಕೂರ್ ಅವರು 2017ರ ಅಕ್ಟೋಬರ್ ತಿಂಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಗುಜರಾತ್ನಲ್ಲಿ ಹಾರ್ದಿಕ್ ಪಟೇಲ್,ಜಿಗ್ನೇಶ್ ಮೇವಾನಿ ಜತೆ ಸೇರಿ ಅಲ್ಪೇಶ್ ಠಾಕೂರ್ ಕೂಡ ಬಿಜೆಪಿ ವಿರುದ್ಧ ಪ್ರಬಲ ಹೋರಾಟ ಮಾಡಿದ್ದರು. ಆದರೆ ಇದೀಗ ದಿಢೀರ್ ರಾಜೀನಾಮೆ ನೀಡಿದ್ದಾರೆ.
ಇವರ ಜತೆಗೆ ಮತ್ತಿಬ್ಬರು ಶಾಸಕರಾದ ಧವಲ್ಸಿನ್ ಠಾಕೂರ್ ಹಾಗೂ ಭಾರ್ತಿಜಿ ಠಾಕೂರ್ ಕೂಡ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ. ಈ ಹಿಂದಿನಿಂದಲೂ ಗುಜರಾತ್ ಕಾಂಗ್ರೆಸ್ ಘಟಕದಲ್ಲಿನ ನಾಯಕತ್ವದ ಬಗ್ಗೆ ಅಸಮಾಧಾನ ಹೊಂದಿದ್ದ ಅಲ್ಪೇಶ್, ಪಕ್ಷದಲ್ಲಿ ಯುವ ಮುಖಂಡರಿಗೆ ಸರಿಯಾದ ಅವಕಾಶ ಸಿಗುತ್ತಿಲ್ಲ ಎಂದು ಆಕ್ರೋಶ ಸಹ ಹೊರಹಾಕಿದ್ದರು. ಇದೀಗ ಪಕ್ಷಕ್ಕೆ ವಿದಾಯ ಘೋಷಣೆ ಮಾಡಿದ್ದಾರೆ.