ನವದೆಹಲಿ: ಗುಜರಾತ್ನಲ್ಲಿ ಕಾಂಗ್ರೆಸ್ ಶಾಸಕರೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ಇಂದು ದೃಢಪಟ್ಟಿದೆ. ಅವರು ಅಹಮದಾಬಾದ್ನ ಕೊರೊನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಹಮದಾಬಾದ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಇಮ್ರಾನ್ ಖೇದವಾಲಾ ಅವರಲ್ಲಿ ಸೋಂಕು ಪತ್ತೆಯಾಗಿದೆ.

ಗಂಟಲು ಮತ್ತು ಕಫದ ಮಾದರಿ ಪರೀಕ್ಷೆಯಲ್ಲಿ ಸೋಂಕಿರುವುದು ದೃಢವಾಗಿದೆ. ಈ ಕುರಿತು ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಮಿತ್ ಚಾವ್ಡೆ ಅವರು ಖಚಿತ ಪಡಿಸಿದ್ದರು.
ಅದಾದ ಬಳಿಕ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಇಮ್ರಾನ್ ಖೇದವಾಲಾ ಅವರನ್ನು ಭೇಟಿಯಾಗಿ ಧೈರ್ಯ ತುಂಬಿದರು. ಈ ಮಧ್ಯೆ ಸಿಎಂ ಸಭೆ ನಡೆಸಿದರು. ಸಚಿವರು ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.