ಅಹಮದಾಬಾದ್: ರಾಜ್ಯಸಭೆಯಲ್ಲಿ ಖಾಲಿ ಸ್ಥಾನಗಳನ್ನು ತುಂಬಲು ಚುನಾವಣಾ ಆಯೋಗ ದಿನಾಂಕ ಘೋಷಿಸಿದ ಬೆನ್ನಲ್ಲೇ ರಾಜಕೀಯ ಬೆಳವಣಿಗೆಗಳು ಬಿರುಸುಗೊಂಡಿವೆ. ಗುಜರಾತ್‌ನ ಇಬ್ಬರು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದಾರೆ. ಶಾಸಕ ಅಕ್ಷಯ್ ಪಟೇಲ್ ಮತ್ತು ಜಿತು ಚೌಧರಿ ಸ್ಪೀಕರ್ ರಾಜೇಂದ್ರ ತ್ರಿವೇದಿ ಅವನ್ನು ಭೇಟಿ ಮಾಡಿ ತಮ್ಮ ರಾಜೀನಾಮ ಪತ್ರವನ್ನು ಸಲ್ಲಿಸಿದ್ದಾರೆ.
ಗುಜರಾತ್‌ನಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರ ರಾಜೀನಾಮೆ - ರಾಜೀನಾಮೆ
ರಾಜ್ಯಸಭಾ ಖಾಲಿ ಸ್ಥಾನಗಳಿಗೆ ಚುನಾವಣಾ ಘೋಷಣೆ ಬೆನ್ನಲ್ಲೇ ಗುಜರಾತ್‌ನಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದಾರೆ.
ಗುಜರಾತ್‌ನಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರ ರಾಜೀನಾಮೆ
ಇಬ್ಬರು ಕಾಂಗ್ರೆಸ್ ಶಾಸಕರ ರಾಜೀನಾಮೆ ಪತ್ರವನ್ನು ಸ್ವೀಕರಿಸಿರುವುದಾಗಿ ಸ್ಪೀಕರ್ ತ್ರಿವೇದಿ ಸ್ಪಷ್ಟಪಡಿಸಿದ್ದಾರೆ. ಅಕ್ಷಯ್ ಪಟೇಲ್ ವಡೋದರದ ಕರ್ಜನ್ ಕ್ಷೇತ್ರದಿಂದ ಜಿತು ಚೌದರಿ ವಲ್ಸಾದ್‌ನ ಕಪ್ರಡಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ನಿನ್ನೆಯಷ್ಟೇ ಈ ಇಬ್ಬರು ನಾಯಕರು ಸಿಎಂ ವಿಜಯ್ ರೂಪಾಣಿ ಮತ್ತು ಡಿಸಿಎಂ ನಿತಿನ್ ಪಟೇಲ್ ಅವರನ್ನು ಭೇಟಿಯಾಗಿದ್ದರು.
ಗುಜರಾತ್‌ನಲ್ಲಿ ನಾಲ್ಕು ರಾಜ್ಯಸಭಾ ಸ್ಥಾನಗಳು ಖಾಲಿ ಇದ್ದು, ಜೂನ್ 19 ರಂದು ಚುನಾವಣೆ ನಡೆಯಲಿದೆ.
Last Updated : Jun 4, 2020, 2:21 PM IST