ಅಹಮದಾಬಾದ್ :ಸಾಮಾಜಿಕ ವಿರೋಧಿ ಚಟುವಟಿಕೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸದೆ, ಅತ್ಯಾಚಾರ ಆರೋಪಿಗಳಿಂದ 20 ಲಕ್ಷ ರೂ. ಲಂಚ ಸ್ವೀಕರಿಸಿದ ಆರೋಪದ ಮೇಲೆ ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ನ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಹಮದಾಬಾದ್ ಪಶ್ಚಿಮ ವಿಭಾಗದ ಮಹಿಳಾ ಪೊಲೀಸ್ ಠಾಣೆಯ ಉಸ್ತುವಾರಿ ವಹಿಸಿಕೊಂಡಿದ್ದ ಶ್ವೇತಾ ಜಡೇಜಾ ಅವರು ಕೆನಾಲ್ ಷಾ ಅವರ ವಿರುದ್ಧ 2019ರಲ್ಲಿ ದಾಖಲಾದ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಕೆನಲ್ ಷಾ ಸಹೋದರರಿಂದ 35 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.