ನವದೆಹಲಿ :ಕೆಲ ವರ್ಷಗಳ ಹಿಂದೆ ಪಾಟಿದಾರ್ ಸಮುದಾಯಕ್ಕೆ ಮೀಸಲಾತಿ ಬೇಕೆಂದು ಇಡೀ ಗುಜರಾತ್‌ನಲ್ಲಿ ಚಳವಳಿ ನಡೆಸಿ ಸುದ್ದಿಯಾಗಿದ್ದ ಹಾರ್ದಿಕ್ ಪಟೇಲ್ ಅವರು ಬಳಿಕ ಕಾಂಗ್ರೆಸ್ ಜೊತೆಗೆ ಗುರಿತಿಸಿಕೊಂಡರು. ಮಹತ್ವದ ಬೆಳವಣಿಗೆಯಲ್ಲಿ ಪಟೇಲ್ ಅವರನ್ನು ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸುವ ಪ್ರಸ್ತಾಪಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ಅನುಮೋದನೆ ನೀಡಿದ್ದಾರೆ.
ಪಾಟಿದಾರ್ ಚಳವಳಿ ನಾಯಕ ಹಾರ್ದಿಕ್ ಪಟೇಲ್ ಗುಜರಾತ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಧ್ಯಕ್ಷ!! - ಪಾಟಿದಾರ್ ಸಮುದಾಯ ಹಾರ್ದಿಕ್ ಪಾಟೀಲ್
ತಕ್ಷಣದಿಂದ ಜಾರಿಗೆ ಬರುವಂತೆ ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಅಧ್ಯಕ್ಷರಾಗಿ ಹಾರ್ದಿಕ್ ಪಟೇಲ್ ಅವರನ್ನು ನೇಮಿಸುವ ಪ್ರಸ್ತಾಪವನ್ನು ಕಾಂಗ್ರೆಸ್ ಅಧ್ಯಕ್ಷರು ಅನುಮೋದಿಸಿದ್ದಾರೆ ಎಂದು ಪಕ್ಷದ ಅಧಿಕೃತ ಮೂಲಗಳು ತಿಳಿಸಿವೆ..
ಹಾರ್ದಿಕ್ ಪಟೇಲ್
ತಕ್ಷಣದಿಂದ ಜಾರಿಗೆ ಬರುವಂತೆ ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿ ಅಧ್ಯಕ್ಷರಾಗಿ ಹಾರ್ದಿಕ್ ಪಟೇಲ್ ಅವರನ್ನು ನೇಮಿಸುವ ಪ್ರಸ್ತಾಪವನ್ನು ಕಾಂಗ್ರೆಸ್ ಅಧ್ಯಕ್ಷರು ಅನುಮೋದಿಸಿದ್ದಾರೆ ಎಂದು ಪಕ್ಷದ ಅಧಿಕೃತ ಮೂಲಗಳು ತಿಳಿಸಿವೆ.
ಪಟೇಲ್ (26) ಗುಜರಾತ್‌ನಲ್ಲಿ ಪಾಟಿದಾರ್ ಮೀಸಲಾತಿ ಆಂದೋಲನದಲ್ಲಿ ಭಾಗವಹಿಸಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದರು. 2019ರ ಮಾರ್ಚ್ 12ರಂದು ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದರು. ಆದರೆ, ಆ ವರ್ಷ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.