ಅಹಮದಾಬಾದ್:ಕಳೆದ 20 ದಿನಗಳಿಂದ ತಮ್ಮ ಪತಿ ಕಾಣೆಯಾಗಿದ್ದಾರೆ ಎಂದು ಹಾರ್ದಿಕ್ ಪಟೇಲ್ ಹೆಂಡತಿ ಕಿಂಜಾಲ್ ಗೋಳಾಡುತ್ತಿದ್ದು, ಹುಡುಕಿಕೊಂಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಕಾಂಗ್ರೆಸ್ ನಾಯಕ, ಪಟೇಲ್ ಮೀಸಲು ಆಂದೋಲನದ ಮುಂಚೂಣಿ ನಾಯಕ ಎಂದು ಗುರುತಿಸಿಕೊಂಡಿದ್ದ ಇವರು ಕಳೆದ ಜನವರಿ 24ರಿಂದ ನಾಪತ್ತೆಯಾಗಿದ್ದು, ಅವರನ್ನ ಹುಡುಕಿಕೊಡಿ ಎಂದು ಅವರ ಪತ್ನಿ ಇದೀಗ ಮನವಿ ಮಾಡಿಕೊಂಡಿದ್ದಾರೆ.
ದೇಶದ್ರೋಹ ಪ್ರಕರಣದಲ್ಲಿ ಭಾಗಿಯಾದ್ದ ಹಾರ್ದಿಕ್ ಪಟೇಲ್ ಅವರನ್ನ ಜನವರಿ 18ರಂದು ಪೊಲೀಸರು ಬಂಧಿಸಿದ್ದರು. ಅದೇ ದಿನ ಜಾಮೀನಿನ ಮೇಲೆ ಹೊರಬಂದಿದ್ದ ಅವರು ಮತ್ತೆ ಕಾಣಿಸಿಕೊಂಡಿಲ್ಲ. ಜತೆಗೆ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಇದೀಗ ಪೊಲೀಸರು ಅವರ ಹುಡುಕಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಆಗಸ್ಟ್ 25, 2015 ರಂದು ಅಹಮದಾಬಾದ್ನಲ್ಲಿ ಪಟೇಲ್ ಸಮುದಾಯ ನಡೆಸಿದ ರ‍್ಯಾಲಿಯಲ್ಲಿ ಹಿಂಸಾಚಾರ ನಡೆದ ನಂತರ ಸ್ಥಳೀಯ ಅಪರಾಧ ಶಾಖೆ ಸಲ್ಲಿಸಿದ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟೇಲ್ ಅವರನ್ನು ಈ ಹಿಂದೆ ಬಂಧಿಸಲಾಗಿತ್ತು. ಆ ನಂತರ 2016 ರ ಜುಲೈನಲ್ಲಿ ಜಾಮೀನು ನೀಡಲಾಗಿತ್ತು. ಇದಾದ ಬಳಿಕ ಅವರನ್ನ ಪೊಲೀಸರು ಮತ್ತೊಮ್ಮೆ ವಶಕ್ಕೆ ಪಡೆದುಕೊಂಡಿದ್ದರು.