ನವದೆಹಲಿ:ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ), ಪಿಎಂ ಕೇರ್ಸ್ ನಿಧಿಗೆ 15 ಕೋಟಿ ರೂ.ಗಳನ್ನು ವರ್ಗಾವಣೆ ಮಾಡುವ ನಿರ್ಧಾರವನ್ನು ವಿರೋಧಿಸಿ ಸಲ್ಲಿಸಲಾಗಿದ್ದ ಪಿಐಎಲ್ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ಪಿಎಂ ಕೇರ್ಸ್ಗೆ ಹಣ ವರ್ಗಾವಣೆ ವಿರೋಧಿಸಿ ಸಲ್ಲಿಸಲಾಗಿದ್ದ ಪಿಐಎಲ್ ವಜಾ
ಪಿಎಂ ಕೇರ್ಸ್ ನಿಧಿಗೆ 15 ಕೋಟಿ ರೂ.ಗಳನ್ನು ವರ್ಗಾವಣೆ ಮಾಡುವ ನಿರ್ಧಾರ ವಿರೋಧಿಸಿ ಸಲ್ಲಿಸಲಾದ ಪಿಐಎಲ್ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ದೆಹಲಿ ಹೈಕೋರ್ಟ್
ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಪ್ರತೀಕ್ ಜಲನ್ ಅವರಿದ್ದ ನ್ಯಾಯಪೀಠವು ಅರ್ಜಿ ವಿಚಾರಣೆಗೆ ನಿರಾಕರಿಸಿದೆ. ನವನೀತ್ ಚತುರ್ವೇದಿ ಈ ಹಿಂದೆ ಹಣ ವರ್ಗಾವಣೆ ಮಾಡುವ ಕುರಿತು ವಿರೋಧಿಸಿ ಕೋರ್ಟ್ಗೆ ಪಿಐಎಲ್ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ಪರವಾಗಿ ಕೋರ್ಟ್ಗೆ ಹಾಜರಾದ ವಕೀಲರನ್ನು ಉದ್ದೇಶಿಸಿ ಮಾತನಾಡಿದ ನ್ಯಾಯಾಧೀಶರು, ಈ ಅರ್ಜಿಯನ್ನು ಹಿಂತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.
ಅರ್ಜಿದಾರರ ಪರ ವಕೀಲರು ಮನವಿಯನ್ನು ಹಿಂಪಡೆಯಲು ಅನುಮತಿ ಕೋರಿದರು. ಈ ಬಳಿಕ ನ್ಯಾಯಾಲಯ ಅರ್ಜಿಯನ್ನು ತಳ್ಳಿ ಹಾಕಿದೆ.