ನವದೆಹಲಿ: 2012ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೊಳಗಾದವರ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ನಿರ್ಣಯಿಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ (ಎನ್‌ಎಚ್‌ಆರ್‌ಸಿ) ನಿರ್ದೇಶನ ನೀಡಬೇಕೆಂದು ಕೋರಿ ಅಪರಾಧಿಗಳು ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಬುಧವಾರ ತಳ್ಳಿಹಾಕಿದೆ.
ನಿರ್ಭಯಾ ಪ್ರಕರಣ: ಅಪರಾಧಿಗಳ ಮತ್ತೊಂದು ಅರ್ಜಿ ತಿರಸ್ಕರಿಸಿದ ಕೋರ್ಟ್ - nirbhaya case
ನಿರ್ಭಯಾ ಆರೋಪಿಗಳ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ನಿರ್ಣಯಿಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ (ಎನ್‌ಎಚ್‌ಆರ್‌ಸಿ) ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾ ಮಾಡಿದೆ.
nirbhaya
ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಡಿ ಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಸಿ ಹರಿ ಶಂಕರ್ ಅವರನ್ನೊಳಗೊಂಡ ನ್ಯಾಯಪೀಠವು, ಮೊದಲು ಎನ್‌ಎಚ್‌ಆರ್‌ಸಿಗೆ ಅರ್ಜಿ ಸಲ್ಲಿಸಿ ಎಂದು ಹೇಳಿ ಅರ್ಜಿಯನ್ನ ವಜಾ ಮಾಡಿತು.
ಪ್ರಕರಣದ ನಾಲ್ಕು ಆರೋಪಿಗಳನ್ನು ಮಂಗಳವಾರವೇ ಗಲ್ಲಿಗೇರಿಸಬೇಕೆಂದು ಈ ಹಿಂದೆಯೇ ದಿನಾಂಕ ನಿಗದಿ ಮಾಡಿತ್ತು. ಆದರೆ ಪವನ್ ಕುಮಾರ್ ಗುಪ್ತಾ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದರಿಂದ ಈ ದಿನಾಂಕ ನಿಗದಿಯೂ ಮುಂದೆ ಹೋಗಿತ್ತು.