ಅಮರಾವತಿ (ಆಂಧ್ರಪ್ರದೇಶ): ಕಳೆದ ವಾರ ವಿಶಾಖಪಟ್ಟಣದಲ್ಲಿ ಪೊಲೀಸರಿಂದ ಹಲ್ಲೆಗೊಳಗಾದ ಸರ್ಕಾರಿ ವೈದ್ಯರ ಹೇಳಿಕೆಯನ್ನು ದಾಖಲಿಸುವಂತೆ ಆಂಧ್ರ ಪ್ರದೇಶ ಹೈಕೋರ್ಟ್ ವಿಶಾಖಪಟ್ಟಣಂ ಸೆಷನ್ಸ್ ನ್ಯಾಯಾಧೀಶರಿಗೆ ನಿರ್ದೇಶನ ನೀಡಿದೆ.
ಡಾ. ಕೆ. ಸುಧಾಕರ್ ರಾವ್ ದಾಖಲಾಗಿರುವ ಸರ್ಕಾರಿ ಆಸ್ಪತ್ರೆಗೆ ವೈಯಕ್ತಿಕವಾಗಿ ಭೇಟಿ ನೀಡಿ ಅವರ ಹೇಳಿಕೆಯನ್ನು ದಾಖಲಿಸುವಂತೆ ಹೈಕೋರ್ಟ್ ಸೆಷನ್ಸ್ ನ್ಯಾಯಾಧೀಶರಿಗೆ ನಿರ್ದೇಶನ ನೀಡಿತು. ವೈದ್ಯರ ಹೇಳಿಕೆಯನ್ನು ಗುರುವಾರ ಸಂಜೆ ವೇಳೆಗೆ ಸಲ್ಲಿಸುವಂತೆ ನ್ಯಾಯಾಲಯ ಆದೇಶ ಹೊರಡಿಸಿದೆ.
ಕೋವಿಡ್ -19 ರೋಗಿಗಳಿಗೆ ಚಿಕಿತ್ಸೆ ನೀಡುವ ವೈದ್ಯರಿಗೆ ಎನ್-95 ಮಾಸ್ಕ್ ನೀಡಲು ಸರ್ಕಾರ ವಿಫಲವಾಗಿದೆ ಎಂದು ಸಾರ್ವಜನಿಕವಾಗಿ ಟೀಕಿಸಿದ್ದಕ್ಕಾಗಿ ಎರಡು ತಿಂಗಳ ಹಿಂದೆ ಅಮಾನತುಗೊಂಡಿದ್ದ, ನರಸಿಪಟ್ನಂನ ಏರಿಯಾ ಆಸ್ಪತ್ರೆಯ ಸಿವಿಲ್ ಅಸಿಸ್ಟೆಂಟ್ ಸರ್ಜನ್ ಸುಧಾಕರ್ ರಾವ್ ಅವರನ್ನು ವಿಶಾಖಪಟ್ಟಣಂನಲ್ಲಿ ಪೊಲೀಸರು ಮೇ 16 ರಂದು ಬಂಧಿಸಿದ್ದರು.
ಶರ್ಟ್ಲೆಸ್ ಆಗಿ ಕಾಣಿಸಿಕೊಂಡಿದ್ದ ವೈದ್ಯರನ್ನು ಪೊಲೀಸರು ಮ್ಯಾನ್ಹ್ಯಾಂಡ್ಲಿಂಗ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ವೈದ್ಯರನ್ನು ಎಳೆದುಕೊಂಡು ಆಟೋರಿಕ್ಷಾದಲ್ಲಿ ಕಟ್ಟಿಹಾಕಿದರು. ಅವರನ್ನು ಕಿಂಗ್ ಜಾರ್ಜ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿಂದ ಅಸ್ವಸ್ಥರಾಗಿದ್ದ ವೈದ್ಯರನ್ನು ಮಾನಸಿಕ ಆರೋಗ್ಯಕ್ಕಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ತೀವ್ರ ಮತ್ತು ಅಸ್ಥಿರ ಮನೋರೋಗದ ಚಿಕಿತ್ಸೆಯಲ್ಲಿದ್ದರು.