ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಈಶಾನ್ಯ ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಉಂಟಾದ ಘರ್ಷಣೆಯಲ್ಲಿ ಓರ್ವ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಸಾವನ್ನಪ್ಪಿರುವುದಾಗಿ ಹಿರಿಯ ಅಧಿಕಾರಿವೋರ್ವರು ಮಾಹಿತಿ ನೀಡಿದ್ದಾರೆ.
ಸಿಎಎ ಪರ-ವಿರೋಧದ ಪ್ರತಿಭಟನೆಯಲ್ಲಿ ಗುಂಪು ಘರ್ಷಣೆ... ಓರ್ವ ಪೊಲೀಸ್ ಸಾವು - ದೆಹಲಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಸಾವು
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಈಶಾನ್ಯ ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಉಂಟಾದ ಘರ್ಷಣೆಯಲ್ಲಿ ಓರ್ವ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಸಾವನ್ನಪ್ಪಿರುವುದಾಗಿ ಹಿರಿಯ ಅಧಿಕಾರಿವೋರ್ವರು ತಿಳಿಸಿದ್ದಾರೆ.

ಓರ್ವ ಪೊಲೀಸ್ ಅಧಿಕಾರಿ ಸಾವು
ಗೋಕುಲ್ಪುರಿ ಸಹಾಯಕ ಪೊಲೀಸ್ ಆಯುಕ್ತರ ಕಚೇರಿ ವ್ಯಾಪ್ತಿಯ ರತನ್ ಲಾಲ್ ಸಾವನ್ನಪ್ಪಿರುವ ಪೊಲೀಸ್ ಹೆಡ್ ಕಾನ್‌ಸ್ಟೇಬಲ್. ಘರ್ಷಣೆಯಲ್ಲಿ ಹಲವು ಪೊಲೀಸ್ ಸಿಬ್ಬಂದಿ ಗಾಯಗೊಂಡಿರುವುದಾಗಿ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ವೇಳೆ ಪರ-ವಿರೋಧ ಗುಂಪುಗಳ ನಡುವೆ ಉಂಟಾದ ಘರ್ಷಣೆಯಲ್ಲಿ ಹಲವು ವಾಹನಗಳು, ಅಂಗಡಿ-ಮುಂಗಟ್ಟುಗಳು ಮತ್ತು ಮನೆಗಳಿಗೂ ಹಾನಿಯಾದ ಬಗ್ಗೆ ವರದಿಯಾಗಿದೆ.