ನವದೆಹಲಿ: ರಾಷ್ಟ್ರ ರಾಜಧಾನಿ- ಎನ್ಸಿಆರ್ ಪ್ರದೇಶಗಳಲ್ಲಿ ವಾಯುಮಾಲಿನ್ಯ ಅಪಾಯಾದ ಮಟ್ಟ ಮೀರಿದ್ದು, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸುಪ್ರೀಂಕೋರ್ಟ್ ವಾಯು ನಿಯಂತ್ರಣ ಮಂಡಳಿ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದೆ.
ನವದೆಹಲಿಯಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ... ಶಾಲಾ ಕಾಲೇಜುಗಳಿಗೆ ದಿಢೀರ್ ರಜೆ!
ದೆಹಲಿಯಲ್ಲಿ ವಾಯುಮಾಲಿನ್ಯದ ಮಟ್ಟ ಗಂಭೀರ ಸ್ವರೂಪದಲ್ಲಿ ಇರುವುದರಿಂದ ಮಾಲಿನ್ಯ ನಿಯಂತ್ರಣ ಪ್ರಾಧಿಕಾರ ಸಹ ಪಟಾಕಿಗಳನ್ನು ಸಿಡಿಸುವುದಕ್ಕೆ ನಿಷೇಧ ಹೇರಿತ್ತು. ಆರೋಗ್ಯ ತುರ್ತು ಪರಿಸ್ಥಿತಿ ವಿಧಿಸಿರುವ ಸುಪ್ರೀಂಕೋರ್ಟ್ ವಾಯು ನಿಯಂತ್ರಣ ಮಂಡಳಿ ನವೆಂಬರ್ 5ರವರೆಗೆ ಯಾವುದೇ ಕಟ್ಟಡ ನಿರ್ಮಾಣ ಚಟುವಟಿಕೆ ನಡೆಸದಂತೆ ಹಾಗೂ ಶಾಲೆ- ಕಾಲೇಜುಗಳಿಗೆ ರಜೆ ನೀಡುವಂತೆ ಆದೇಶಿಸಿದೆ.
ದೆಹಲಿಯಲ್ಲಿ ವಾಯುಮಾಲಿನ್ಯದ ಮಟ್ಟ ಗಂಭೀರ ಸ್ವರೂಪದಲ್ಲಿ ಇರುವುದರಿಂದ ಮಾಲಿನ್ಯ ನಿಯಂತ್ರಣ ಪ್ರಾಧಿಕಾರ ಸಹ ಪಟಾಕಿಗಳನ್ನು ಸಿಡಿಸುವುದಕ್ಕೆ ನಿಷೇಧ ಹೇರಿತ್ತು. ಈಗ ಆರೋಗ್ಯ ತುರ್ತು ಪರಿಸ್ಥಿತಿ ವಿಧಿಸಿದ್ದು, ನವೆಂಬರ್ 5ರ ವರೆಗೆ ಯಾವುದೇ ಕಟ್ಟಡ ನಿರ್ಮಾಣ ಚಟುವಟಿಕೆ ನಡೆಸದಂತೆ ಹಾಗೂ ಶಾಲೆ- ಕಾಲೇಜುಗಳಿಗೆ ರಜೆ ನೀಡುವಂತೆ ಆದೇಶಿಸಿದೆ.
ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಳವಾಗಿದೆ. ಇಡೀ ರಾಜಧಾನಿ ಗ್ಯಾಸ್ ಚೇಂಬರ್ ಆಗಿ ಪರಿವರ್ತಿತಗೊಂಡಿದೆ. ಶಾಲಾ ಮಕ್ಕಳು ಮತ್ತು ನಿವಾಸಿಗಳಿಗೆ ಮಾಸ್ಕ್ ಧರಿಸುವಂತೆ ಸಿಎಂ ಕೇಜ್ರಿವಾಲ್ ಮನವಿ ಮಾಡಿದ್ದಾರೆ. ಮಾಲಿನ್ಯದ ಕುರಿತು ದೆಹಲಿ, ಹರಿಯಾಣ, ರಾಜಸ್ತಾನ, ಉತ್ತರ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಮಾಲಿನ್ಯ ನಿಯಂತ್ರಣ ಪ್ರಾಧಿಕಾರದ ಅಧ್ಯಕ್ಷ ಪತ್ರ ಬರೆದು, 'ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮುಖ್ಯವಾಗಿ ಮಕ್ಕಳ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆ ಕೈಗೊಳ್ಳುವಂತೆ' ಕೋರಿದ್ದಾರೆ.