ಕರ್ನಾಟಕ

karnataka

ETV Bharat / bharat

ಕೊರೊನಾ ಬಿಕ್ಕಟ್ಟು: ಪ್ರಧಾನಿ ಮೋದಿ ನಾಯಕತ್ವವನ್ನು ಶ್ಲಾಘಿಸಿದ ಕೇಂದ್ರ ಆರೋಗ್ಯ ಸಚಿವ - ಮೋದಿ ನಾಯಕತ್ವವನ್ನು ಶ್ಲಾಘಿಸಿದ ಕೇಂದ್ರ ಆರೋಗ್ಯ ಸಚಿವ

ಪ್ರಧಾನಿ ಮೋದಿ ನಾಯಕತ್ವದಲ್ಲಿ ಕೊರೊನಾ ಸೋಂಕಿನ ಬಿಕ್ಕಟ್ಟನ್ನು ಸಮರ್ಥವಾಗಿ ನಿರ್ವಹಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಲೋಕಸಭೆಯಲ್ಲಿ ತಿಳಿಸಿದ್ದಾರೆ.

Health Minister hails PM Modi
ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್

By

Published : Sep 14, 2020, 12:36 PM IST

ನವದೆಹಲಿ:ಕೋವಿಡ್-19 ಸಾಂಕ್ರಾಮಿಕ ಭೀತಿಯ ನಡುವೆ ಆರಂಭವಾದ ಸಂಸತ್ ಮುಂಗಾರು ಅಧಿವೇಶನದಲ್ಲಿ ಮಾತನಾಡಿದ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಪ್ರಧಾನಿ ಮೋದಿ ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ.

ದೇಶದಲ್ಲಿ ಗರಿಷ್ಠ ಕೊರೊನಾ ಪ್ರಕರಣಗಳು ಮತ್ತು ಸಾವುಗಳು ಮುಖ್ಯವಾಗಿ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ, ಉತ್ತರ ಪ್ರದೇಶ, ದೆಹಲಿ, ಪಶ್ಚಿಮ ಬಂಗಾಳ, ಬಿಹಾರ, ತೆಲಂಗಾಣ, ಒಡಿಶಾ, ಅಸ್ಸೋಂ, ಕೇರಳ ಮತ್ತು ಗುಜರಾತ್ ನಿಂದ ವರದಿಯಾಗಿವೆ. ಇವೆಲ್ಲವೂ 1 ಲಕ್ಷಕ್ಕೂ ಹೆಚ್ಚು ಸೋಂಕಿನ ಪ್ರಕರಣಗಳನ್ನು ವರದಿ ಮಾಡಿವೆ ಎಂದು ಮಾಹಿತಿ ನೀಡಿದರು.

ಕೋವಿಡ್-19 ಅನ್ನು ನಿರ್ವಹಿಸುವ ನಮ್ಮ ಪ್ರಯತ್ನದಿಂದ, ಭಾರತವು ತನ್ನ ಪ್ರಕರಣಗಳು ಮತ್ತು ಸಾವುಗಳನ್ನು ಮಿಲಿಯನ್‌ಗೆ 3,328 ಪಾಸಿಟಿವ್​ ಪ್ರಕರಣಗಳು ಮತ್ತು ಮಿಲಿಯನ್ ಜನಸಂಖ್ಯೆಗೆ ಕ್ರಮವಾಗಿ 55 ಸಾವುಗಳಿಗೆ ನಿಯಂತ್ರಿಸಿದೆ. ಇದು ವಿಶ್ವದ ಇತರೆ ಕೊರೊನಾ ಪೀಡಿತ ದೇಶಗಳಿಗೆ ಹೋಲಿಕೆ ಮಾಡಿದರೆ ಅತ್ಯಂತ ಕಡಿಮೆ ಪ್ರಮಾಣವಾಗಿದೆ ಎಂದು ಸಚಿವ ಡಾ. ಹರ್ಷವರ್ಧನ್​ ಮಾಹಿತಿ ನೀಡಿದ್ದಾರೆ.

ABOUT THE AUTHOR

...view details