ಕರ್ನಾಟಕ

karnataka

ETV Bharat / bharat

ಮಹಾರಾಷ್ಟ್ರ-ಗುಜರಾತ್‌ನಲ್ಲಿ ಮಿತಿಮೀರಿದ ಕೊರೊನಾ: ಕೇಂದ್ರ ಆರೋಗ್ಯ ಸಚಿವಾಲಯ ಕಳವಳ - ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷ​ವರ್ಧನ್

ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಕಿಲ್ಲರ್ ಕೊರೊನಾ ವೈರಸ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು ಈ ಬಗ್ಗೆ ಆರೋಗ್ಯ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ.

Family Welfare Minister Dr. Harsh Vardhan
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷ​ವರ್ಧನ್

By

Published : May 6, 2020, 7:31 PM IST

ನವದೆಹಲಿ:ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿನ COVID-19 ಪರಿಸ್ಥಿತಿಯ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷ​ವರ್ಧನ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷ​ವರ್ಧನ್

ವಿಡಿಯೋ ಕಾನ್ಫರೆನ್ಸ್​ ಮೂಲಕ ಇಂದು ಎರಡೂ ರಾಜ್ಯ ಸರ್ಕಾರಗಳ ಸಂಬಂಧಿತ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದ ಸಚಿವರು, ಶೀಘ್ರದಲ್ಲೇ ಮಹಾರಾಷ್ಟ್ರ ಮತ್ತು ಗುಜರಾತ್‌ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ರವಾನಿಸಿದೆ. ಅಲ್ಲದೆ ಹೊಸ ಪ್ರಕರಣಗಳು ಬರದಂತೆ ನೋಡಿಕೊಳ್ಳುವುದು ನಮ್ಮ ಉದ್ದೇಶವಾಗಿದೆ. ಈ ಬಗ್ಗೆ ಅಗತ್ಯವಿರುವ ಎಲ್ಲ ಬೆಂಬಲವನ್ನು ನೀಡುವುದರ ಬಗ್ಗೆ ಆರೋಗ್ಯ ಸಚಿವಾಲಯ ಮಾಹಿತಿ ರವಾನಿಸಿದೆ.

ಮಹಾರಾಷ್ಟ್ರದ 34 ಜಿಲ್ಲೆಗಳು ಕೊರೊನಾ ಪೀಡಿತ ಪ್ರದೇಶವೆಂದು ಗುರುತಿಸಲಾಗಿದ್ದು ಮುಂಬೈ, ಪುಣೆ, ನಾಸಿಕ್, ಔರಂಗಾಬಾದ್​, ನಾಗ್ಪುರ್​ ಮತ್ತು ಸಿಲಾಪುರ್​ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ಕಂಡು ಬಂದಿವೆ. ಮಹಾರಾಷ್ಟ್ರದ ಒಟ್ಟು 36 ಜಿಲ್ಲೆಗಳಲ್ಲಿ 14 ಕೆಂಪು ವಲಯ, 16 ಕಿತ್ತಳೆ ವಲಯ ಮತ್ತು 6 ಹಸಿರು ವಲಯಗಳನ್ನಾಗಿ ಸರ್ಕಾರ ಗುರುತಿಸಿದೆ. ಮುಂಬೈ ಮತ್ತು ಮುಂಬೈ ಉಪನಗರಗಳು ಕೆಂಪು ವಲಯಗಳ ಅಡಿಯಲ್ಲಿ ಬರುತ್ತವೆ. ಇಲ್ಲಿ ಯಾವುದೇ ಹೊಸ ಪ್ರಕರಣಗಳು ಬರದಂತೆ ನೋಡಿಕೊಳ್ಳುವುದರ ಬಗ್ಗೆ ಹಾಗೂ ಎಲ್ಲಾ ರೀತಿಯ ಸಹಾಯ ಮಾಡುವುದರ ಬಗ್ಗೆ ಅಭಯ ನೀಡಿರುವುದಾಗಿ ಆರೋಗ್ಯ ಸಚಿವಾಲಯ ಹೇಳಿದೆ.

ಕೋವಿಡ್ -19 ವೈರಸ್​ ಹತ್ತಿಕ್ಕಲು ಹಾಗೂ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತಗಳಿಗೆ ಸಹಾಯ ಮಾಡಲು ಕೇಂದ್ರ ಸರ್ಕಾರವು ಈಗಾಗಲೇ ಎರಡು ತಂಡವನ್ನು ಮಹಾರಾಷ್ಟ್ರಕ್ಕೆ ಕಳುಹಿಸಿರುವ ಬಗ್ಗೆ ಸಚಿವರು ಪ್ರಸ್ತಾಪಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಪ್ರಸ್ತುತ 1026 ಕಂಟೈನ್ಮೆಂಟ್‌ ಪ್ರದೇಶವೆಂದು ಗುರುತಿಸಲಾಗಿದೆ. 617 ಸಾವುಗಳು ಸೇರಿದಂತೆ ಮಹಾರಾಷ್ಟ್ರದಲ್ಲಿ ಬುಧವಾರ ಮಧ್ಯಾಹ್ನದವರೆಗೆ 15,525 ಪ್ರಕರಣಗಳು ದಾಖಲಾಗಿವೆ. ಇನ್ನು ರಾಜ್ಯದಲ್ಲಿ 2,819 ರೋಗಿಗಳನ್ನು ಗುಣಪಡಿಸಿ ಮನೆಗೆ ಕಳುಹಿಸಿದ್ದು ವಿಶೇಷವೆಂದಿದ್ದಾರೆ.

ಇನೊಂದೆಡೆ ಗುಜರಾತ್​ ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಂವಹನ ನಡೆಸಿದ ಕೇಂದ್ರ ಆರೋಗ್ಯ ಸಚಿವರು, ಇಲ್ಲಿಯೂ ಕೂಡ COVID-19 ಸಾಂಕ್ರಾಮಿಕ ರೋಗ ಹರಡುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಸಭೆಯಲ್ಲಿ ರಾಜ್ಯ ಆರೋಗ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ, ಆರೋಗ್ಯ ಕಾರ್ಯದರ್ಶಿ ಪ್ರೀತಿ ಸುಡಾನ್ ಉಪಸ್ಥಿತರಿದ್ದರು. ಗುಜರಾತ್​​ನಲ್ಲಿ ಈ ಕಾಯಿಲೆಯಿಂದ ಈವರೆಗೆ 368 ಜನರು ಮೃತಪಟ್ಟಿದ್ದು ಮಂಗಳವಾರ, ಅತಿ ಹೆಚ್ಚು (441) ಕೋವಿಡ್ 19 ಪ್ರಕರಣಗಳು ದಾಖಲಾಗಿವ ಬಗ್ಗೆ ಮಾಹಿತಿ ಪಡೆದರು.

ಅಹಮದಾಬಾದ್, ವಡೋದರಾ ಮತ್ತು ಸೂರತ್​​ನಲ್ಲಿ ಅತಿ ಹೆಚ್ಚು ಪ್ರಕರಣಗಳು ಕಂಡುಬಂದಿದ್ದು COVID-19 ವಿರುದ್ಧದ ಹೋರಾಟದಲ್ಲಿ ಅಗತ್ಯವಿರುವ ಎಲ್ಲಾ ಬೆಂಬಲವನ್ನು ನೀಡುವುದಾಗಿ ಗುಜರಾತ್ ಸರ್ಕಾರಕ್ಕೆ ಡಾ. ಹರ್ಷ​ವರ್ಧನ್ ಭರವಸೆ ನೀಡಿದ್ದಾರೆ ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳ ಪ್ರಕಾರ ಗುಜರಾತ್​ನಲ್ಲಿಯೂ ಕೂಡ ಅತಿ ಹೆಚ್ಚು ಪೊಸಿಟಿವ್​ ಪ್ರಕರಣಗಳು ಕಂಡುಬಂದಿದ್ದು ಗರಿಷ್ಠ ಸಂಖ್ಯೆಯ COVID-19 ಪ್ರಕರಣಗಳನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಇದು ಕೂಡ ಅಗ್ರಸ್ಥಾನದಲ್ಲಿದೆ ಎನ್ನಲಾಗುತ್ತಿದೆ.

ABOUT THE AUTHOR

...view details