ಜೈಪುರ(ರಾಜಸ್ಥಾನ):ಕೊರೊನಾ ಹೆಸರನ್ನು ಕೇಳಿ ಜಗತ್ತೇ ಬೆಚ್ಚುತ್ತಿದೆ. ಇದರ ಬೆನ್ನಲ್ಲೆ ಆರೋಗ್ಯ ಕಾರ್ಯಕರ್ತ ಜನರಿಗೆ ಕೊರೊನಾ ಬಗ್ಗೆ ಹೆದರಿಕೆ ಹುಟ್ಟಿಸುವ ಪೋಸ್ಟ್ ಮಾಡಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ.
ಕೊರೊನಾ ಬಗ್ಗೆ ಸುಳ್ಳು ಮಾಹಿತಿ ಪೋಸ್ಟ್ ಮಾಡಿದ್ದ ವ್ಯಕ್ತಿ ಬಂಧನ - ಜೈಪುರ(ರಾಜಸ್ಥಾನ):
ದೌಸಾ ಜಿಲ್ಲೆಯ ಮಾಹುವಾದಲ್ಲಿ ಹಿರಿಯ ಚಿಕಿತ್ಸಾ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದ ಗುತ್ತಿಗೆ ನೌಕರ ಅನಿಲ್ ಟ್ಯಾಂಕ್ ಎಂಬುವ ವ್ಯಕ್ತಿ. ಕೊರೊನಾ ಬಗ್ಗೆ ಸುಳ್ಳು ಸುದ್ದಿ ಹರಡಿ, ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಕಂಡುಬಂದಿವೆ. ಇದಕ್ಕೆ ಚಿಕಿತ್ಸೆ ನೀಡಲು ಪ್ರತ್ಯೇಕ ವಾರ್ಡ್ಗಳನ್ನು ತೆರೆಯಲಾಗಿದೆ ಎಂದು ಹೇಳಿದ್ದನು.
ದೌಸಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸುಳ್ಳು ಸುದ್ದಿ ಹರಡಿದ ಆರೋಪದ ಮೆಲೆ ಆರೋಗ್ಯ ಕಾರ್ಯಕರ್ತನನ್ನು ಬಂಧಿಸಲಾಗಿದೆ. ಅಲ್ಲದೆ, ಸೇವೆಯಿಂದ ತೆಗೆದುಹಾಕಲಾಗಿದೆ. ದೌಸಾ ಜಿಲ್ಲೆಯ ಮಾಹುವಾದಲ್ಲಿ ಹಿರಿಯ ಚಿಕಿತ್ಸಾ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದ ಗುತ್ತಿಗೆ ನೌಕರ ಅನಿಲ್ ಟ್ಯಾಂಕ್ ಎಂಬುವ ವ್ಯಕ್ತಿ. ಕೊರೊನಾ ಬಗ್ಗೆ ಸುಳ್ಳು ಸುದ್ದಿ ಹರಡಿ, ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಕಂಡುಬಂದಿವೆ. ಇದಕ್ಕೆ ಚಿಕಿತ್ಸೆ ನೀಡಲು ಪ್ರತ್ಯೇಕ ವಾರ್ಡ್ಗಳನ್ನು ತೆರೆಯಲಾಗಿದೆ ಎಂದು ಹೇಳಿದ್ದನು.
ಅನಿಲ್ ಹೇಳಿಕೆ ಸಂಬಂಧ ಎಚ್ಚೆತ್ತ ಮಾಹುವಾ ವೃತ್ತದ ಉಪ ಪೊಲೀಸ್ ವರಿಷ್ಠಾಧಿಕಾರಿ ಶಂಕರ್ ಲಾಲ್ ಆರೋಪಿಯನ್ನು ಬಂಧಿಸಿದ್ದಾರೆ.