ಪಾಟ್ನಾ: ಲಾಕ್ಡೌನ್ನಿಂದಾಗಿ ರಾಜಸ್ಥಾನದ ಕೋಟಾದಲ್ಲಿ ಸಿಕ್ಕಿ ಬಿದ್ದಿರುವ ಬಿಹಾರ ವಿದ್ಯಾರ್ಥಿಗಳನ್ನು ಮರಳಿ ಕರೆತರುವಂತೆ ಕೋರಿ ಪಾಟ್ನಾ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ವಿದ್ಯಾರ್ಥಿಗಳನ್ನು ಕರೆತರಲು ನಿರ್ದೇಶಿಸುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ
ರಾಜ್ಯದ ವಿದ್ಯಾರ್ಥಿಗಳನ್ನು ಮರಳಿ ಕರೆತರುವಂತೆ ಬಿಹಾರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಪಿಐಎಲ್ ಸಲ್ಲಿಸಲಾಗಿದೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಬಿಹಾರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಏ.27 ಕ್ಕೆ ಮುಂದೂಡಿದೆ.
ವಿದ್ಯಾರ್ಥಿಗಳನ್ನು ಮರಳಿ ರಾಜ್ಯಕ್ಕೆ ಕರೆತರುವಂತೆ ಬಿಹಾರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಬಿಹಾರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಏ.27 ಕ್ಕೆ ಮುಂದೂಡಿದೆ.
ಪವನಕುಮಾರ ಎಂಬುವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ನ್ಯಾಯಮೂರ್ತಿ ಹೇಮಂತ ಕುಮಾರ ಶ್ರೀವಾಸ್ತವ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಯಿತು. ಕೋಟಾದಲ್ಲಿ ಸಾಕಷ್ಟು ಸಂಖ್ಯೆಯ ಬಿಹಾರ ವಿದ್ಯಾರ್ಥಿಗಳಿದ್ದಾರೆ. ಲಾಕ್ಡೌನ್ನಿಂದಾಗಿ ಅವರೆಲ್ಲ ತೀರಾ ಕಷ್ಟದಲ್ಲಿದ್ದಾರೆ. ಉತ್ತರ ಪ್ರದೇಶ ಹಾಗೂ ಮಧ್ಯ ಪ್ರದೇಶ ಸರ್ಕಾರಗಳು ಕೋಟಾದಲ್ಲಿದ್ದ ತಮ್ಮ ವಿದ್ಯಾರ್ಥಿಗಳನ್ನು ಮರಳಿ ಕರೆಸಿಕೊಂಡಿವೆ. ಆದರೆ ಬಿಹಾರ ಸರ್ಕಾರ ಆ ನಿಟ್ಟಿನಲ್ಲಿ ಏನೂ ಮಾಡುತ್ತಿಲ್ಲ ಎಂದು ಪಿಐಎಲ್ನಲ್ಲಿ ತಿಳಿಸಲಾಗಿದೆ.