ಕರ್ನಾಟಕ

karnataka

ETV Bharat / bharat

ಮಹಾಮಳೆಗೆ ಮುಂಬೈ ತತ್ತರ... 27ಕ್ಕೂ ಹೆಚ್ಚು ಜೀವಗಳ ಬಲಿ, ರೈಲು ಸಂಚಾರ ಸ್ಥಗಿತ!

ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದ್ದು, ಇಲ್ಲಿಯವರೆಗೂ 27ಕ್ಕೂ ಹೆಚ್ಚು ಜೀವಗಳು ಬಲಿಯಾಗಿವೆ.

ಮಹಾಮಳೆಗೆ ಮುಂಬೈ ತತ್ತರ

By

Published : Jul 2, 2019, 8:52 PM IST

ಮುಂಬೈ:ವಾಣಿಜ್ಯ ನಗರಿ ಮುಂಬೈನಲ್ಲಿ ವರುಣನ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಇಲ್ಲಿಯವರೆಗೂ 27ಕ್ಕೂ ಹೆಚ್ಚು ಜೀವಗಳು ಬಲಿಯಾಗಿವೆ. ಭಾರಿ ಮಳೆಯಿಂದಾಗಿ ರಸ್ತೆಗಳು ಮತ್ತು ರೈಲು ಹಳಿಗಳಲ್ಲಿ ನೀರು ತುಂಬಿಕೊಂಡಿದ್ದು, ರಸ್ತೆ, ರೈಲು ಸಂಚಾರಕ್ಕೆ ಅಡ್ಡಿಯಾಗಿದೆ.

ಮಹಾಮಳೆಗೆ ಮುಂಬೈ ತತ್ತರ
ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯ ಆರ್ಭಟ ಇನ್ನೂ ಕಡಿಮೆಯಾಗಿಲ್ಲ. ಈಗಾಗಲೇ ಹಲವೆಡೆ ರೈಲು ಸಂಚಾರ ಸ್ಥಗಿತಗೊಂಡಿದ್ದು, ಸಿಯೊನ್​ ಸೇರಿದಂತೆ ಅನೇಕ ರೈಲ್ವೆ ನಿಲ್ದಾಣಗಳ ಹಳಿಗಳ ಮೇಲೆ ನೀರು ನಿಂತು ಸಂಚಾರಕ್ಕೆ ಅಡ್ಡಿಯಾಗಿದೆ.

ಮಹಾಮಳೆಗೆ ಬಹುತೇಕ ರಸ್ತೆಗಳು ನೀರಿನಲ್ಲಿ ಮುಳುಗಿ ಹೋಗಿದ್ದು, ಜನಜೀವನ ಸಹ ಅಸ್ತವ್ಯಸ್ತವಾಗಿದೆ. ಮಳೆಗೆ ನಿನ್ನೆ ಪೂರ್ವ ಮಲಾದ್​ ಪ್ರದೇಶದಲ್ಲಿನ ಕಟ್ಟಡದ ಗೋಡೆಯೊಂದು ಕುಸಿದಿತ್ತು. ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ವಿವಿಧ ಪ್ರದೇಶಗಳಲ್ಲಿ ಎನ್​ಡಿಆರ್​ಎಫ್​ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಎಲ್ಲ ರೀತಿಯ ಎಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಫಡ್ನವೀಸ್ ತಿಳಿಸಿದ್ದಾರೆ.

ABOUT THE AUTHOR

...view details