ಕರ್ನಾಟಕ

karnataka

ETV Bharat / bharat

ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ಕೆಲ ದಿನಗಳವರೆಗೂ ಹಲವು ರಾಜ್ಯಗಳಲ್ಲಿ ಮತ್ತೆ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Heavy rainfall
ಮಳೆ

By

Published : Aug 25, 2020, 12:04 PM IST

ನವದೆಹಲಿ: ಒಡಿಶಾ, ಬಿಹಾರ, ರಾಜಸ್ಥಾನ ಮತ್ತು ಉತ್ತರಾಖಂಡ್​ ರಾಜ್ಯಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪಶ್ಚಿಮ ಬಂಗಾಳ ಮತ್ತು ಗುಜರಾತ್‌ನ ಗಂಗಾ ನದಿ ತೀರದ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಇದರೊಂದಿಗೆ ಹಿಮಾಚಲ ಪ್ರದೇಶ, ಉತ್ತರಾಖಂಡ್​​, ಉತ್ತರ ಪ್ರದೇಶ, ಪಶ್ಚಿಮ ರಾಜಸ್ಥಾನ, ಛತ್ತೀಸ್‌ಗಢ, ಬಿಹಾರ, ಜಾರ್ಖಂಡ್, ಅಸ್ಸಾಂ, ಮೇಘಾಲಯ, ಮಧ್ಯ ಮಹಾರಾಷ್ಟ್ರ, ಕೊಂಕಣ ಪ್ರದೇಶ, ಗೋವಾ, ಆಂಧ್ರ ಪ್ರದೇಶದ ಕರಾವಳಿ ಜಿಲ್ಲೆಗಳು, ತಮಿಳುನಾಡು, ಪುದುಚೇರಿ ಮತ್ತು ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಒಡಿಶಾ ರಾಜ್ಯದಲ್ಲಿ ಭಾರೀ ಮಳೆ

ನೈಋತ್ಯ ರಾಜಸ್ಥಾನ ಮತ್ತು ನೆರೆಯ ಪ್ರದೇಶಗಳಲ್ಲೂ ಮುಂದಿನ 24 ಗಂಟೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಗಂಟೆಗೆ ಸುಮಾರು 50-60 ಕಿ.ಮೀ. ವೇಗದದಲ್ಲಿ ಬೀಸುವ ಗಾಳಿ ನೈಋತ್ಯ ಅರಬ್ಬೀ ಸಮುದ್ರಕ್ಕೆ ಅಪ್ಪಳಿಸಲಿದೆ. ಉತ್ತರ ಬಂಗಾಳ ಕೊಲ್ಲಿಯಲ್ಲೂ ಗಂಟೆಗೆ 45-55 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಗುಜರಾತ್ ಕರಾವಳಿಯುದ್ದಕ್ಕೂ ಭಾರೀ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ABOUT THE AUTHOR

...view details