ಮಹಾರಾಷ್ಟ್ರ:ನಗರದಲ್ಲಿ ನಿರಂತರ ಮಳೆಯಾದ ಹಿನ್ನೆಲೆ ಮುಂಬಯಿಯ ವಿವಿಧ ಭಾಗಗಳು ಜಲಾವೃತಗೊಂಡಿವೆ. ಕಳೆದ 10 ಗಂಟೆಗಳಲ್ಲಿ ಮುಂಬೈ ನಗರದಲ್ಲಿ 230 ಮಿ.ಮೀ.ಗಿಂತ ಹೆಚ್ಚು ಮಳೆಯಾಗಿದೆ ಎಂದು ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೋರೇಶನ್ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ಸತತ ಮಳೆ: ಕೆಲ ಮಾರ್ಗಗಳು ಬ್ಲಾಕ್, ಸಂಚಾರ ಬಂದ್ - ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್
ಕಳೆದ 10 ಗಂಟೆಗಳಲ್ಲಿ ಮುಂಬೈ ನಗರದಲ್ಲಿ 230 ಮಿ.ಮೀ.ಗಿಂತ ಹೆಚ್ಚು ಮಳೆಯಾಗಿದೆ ಎಂದು ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೋರೇಶನ್ ತಿಳಿಸಿದೆ.
landslide
ವೆಸ್ಟರ್ನ್ ಲೈನ್ ಕುರ್ಲಾ ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (ಸಿಎಸ್ಎಂಟಿ) ನಡುವಿನ ಬಂದರು ಮಾರ್ಗವು ಸಂಪೂರ್ಣವಾಗಿ ಬ್ಲಾಕ್ ಆಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿಯೂ ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ವೆಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯನ್ನು ಮಕರದಲ್ಲಿ ನಿರ್ಬಂಧಿಸಲಾಗಿದೆ.
ಭಾರಿ ಮಳೆಯ ಮುನ್ಸೂಚನೆಯನ್ನು ಗಮನದಲ್ಲಿಟ್ಟುಕೊಂಡು ತುರ್ತು ಸೇವೆಗಳನ್ನು ಹೊರತುಪಡಿಸಿ ಎಲ್ಲ ಕಚೇರಿಗಳು ಮತ್ತು ಇತರ ಸಂಸ್ಥೆಗಳನ್ನು ಇಂದು ಮುಚ್ಚುವಂತೆ ಬೃಹನ್ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮನವಿ ಮಾಡಿದೆ.
Last Updated : Aug 4, 2020, 2:19 PM IST