ಕರ್ನಾಟಕ

karnataka

ETV Bharat / bharat

ಮುಂದಿನ 5 ದಿನಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ - ಪಶ್ಚಿಮ-ಮಧ್ಯ ಬಂಗಾಳಕೊಲ್ಲಿ

ಮುಂದಿನ ಐದು ದಿನಗಳಲ್ಲಿ ದಕ್ಷಿಣ ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

ಭಾರತೀಯ ಹವಾಮಾನ ಇಲಾಖೆ
ಭಾರತೀಯ ಹವಾಮಾನ ಇಲಾಖೆ

By

Published : Sep 10, 2020, 11:26 AM IST

ನವದೆಹಲಿ: ಮುಂದಿನ ಐದು ದಿನಗಳಲ್ಲಿ ದಕ್ಷಿಣ ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಕರಾವಳಿಯ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಚಂಡಮಾರುತದ ಪ್ರಭಾವ ಬೀರಲಿದೆ ಎಂದು ಐಎಂಡಿ ತಿಳಿಸಿದೆ. ಗಂಗೆಟಿಕ್ ಪಶ್ಚಿಮ ಬಂಗಾಳ ಮತ್ತು ನೆರೆಹೊರೆಯ ಭಾಗಗಳ ಮೇಲೆ ಚಂಡಮಾರುತದ ಪ್ರಭಾವವಿರಲಿದೆ. ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಒತ್ತಡ ಕಡಿಮೆ ಬೀಳಲಿದೆ. ಇವುಗಳ ಪ್ರಭಾವದಿಂದ ಈಶಾನ್ಯ ಮತ್ತು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಮುಂದಿನ ಐದು ದಿನಗಳಲ್ಲಿ ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಮುಂದಿನ ನಾಲ್ಕು-ಐದು ದಿನಗಳಲ್ಲಿ ಈಶಾನ್ಯ ಭಾರತದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸೆಪ್ಟೆಂಬರ್ 12ರಿಂದ ಒಡಿಶಾ, ಕರಾವಳಿ ಆಂಧ್ರ ಪ್ರದೇಶ, ಯಾನಮ್, ತೆಲಂಗಾಣ, ವಿದರ್ಭದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ.

ಸೆಪ್ಟೆಂಬರ್ 10ರಿಂದ 13ರವರೆಗೆ ಕರಾವಳಿ ಕರ್ನಾಟಕ, ಸೆಪ್ಟೆಂಬರ್ 9-12ರ ಅವಧಿಯಲ್ಲಿ ದಕ್ಷಿಣ ಕರ್ನಾಟಕ, ಕೇರಳ ಮತ್ತು ಮಾಹೆಯಲ್ಲಿ ಸೆಪ್ಟೆಂಬರ್ 9-11ರ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ABOUT THE AUTHOR

...view details