ಚಂಡೀಗಢ :ನವದೆಹಲಿಯಲ್ಲಿ ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ಹಿಂಸಾಚಾರ ನಡೆದ ಹಿನ್ನೆಲೆ ಹರಿಯಾಣದ ಸಿಎಂ ಮನೋಹರಲಾಲ್ ಕಟ್ಟರ್ ತಮ್ಮ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಿದ್ದಾರೆ.
ಟ್ರ್ಯಾಕ್ಟರ್ ರ್ಯಾಲಿ ತಡೆದ ಹಿನ್ನೆಲೆ ಹಿಂಸಾಚಾರ ಭುಗಿಲೆದ್ದಿದ್ದು, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ತಾರಕಕ್ಕೆ ಏರಿತ್ತು. ಈ ಹಿನ್ನೆಲೆ ಹರಿಯಾಣ ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಸಿಎಂ ಮನೋಹರಲಾಲ್ ಕಟ್ಟರ್ ಪೊಲೀಸ್ ಮಹಾನಿರ್ದೇಶಕ ಮನೋಜ್ ಯಾದವ್ಗೆ ಈ ಬಗ್ಗೆ ನಿರ್ದೇಶನ ನೀಡಿದ್ದು, ಯಾವುದೇ ಕಾರಣಕ್ಕೂ ದೆಹಲಿಯ ಪ್ರತಿಭಟನೆ ರಾಜ್ಯದಲ್ಲಿ ಹಿಂಸಾಚಾರಕ್ಕೆ ಕಾರಣವಾಗಬಾರದು ಎಂಬ ಸೂಚನೆ ನೀಡಿದ್ದಾರೆ.