ನವದೆಹಲಿ:ಕೊರೊನಾ ಸುಳಿಯಲ್ಲಿ ಭಾರತ ಸಿಲುಕಿದ್ದು, ಒಂದೇ ದಿನ 32 ಸಾವಿರಕ್ಕೂ ಅಧಿಕ ಕೇಸ್ಗಳು ವರದಿಯಾಗಿವೆ. ಪ್ರಕರಣಗಳ ಸಂಖ್ಯೆ 10 ಲಕ್ಷ ಗಡಿಯತ್ತ ಸಾಗುತ್ತಿದ್ದು, ಇತ್ತ ಚೇತರಿಕೆ ಪ್ರಮಾಣ ಕೂಡ ಶೇ. 63.24ಕ್ಕೆ ಹೆಚ್ಚಳವಾಗಿದೆ.
ದೇಶದಲ್ಲಿ ಕೋವಿಡ್ ಅಟ್ಟಹಾಸ: ಒಂದೇ ದಿನ 32 ಸಾವಿರ ಕೇಸ್ ಪತ್ತೆ, 10 ಲಕ್ಷ ಗಡಿಯತ್ತ ಸೋಂಕಿತರ ಸಂಖ್ಯೆ - ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ
ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,68,876ಕ್ಕೆ ಹಾಗೂ ಮೃತರ ಸಂಖ್ಯೆ 24,915ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಕೋವಿಡ್ ಅಟ್ಟಹಾಸ
ಕಳೆದ 24 ಗಂಟೆಗಳಲ್ಲಿ ಈವರೆಗೆ ಅತಿ ಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 32,695 ಸೋಂಕಿತರು ಪತ್ತೆಯಾಗಿದ್ದು, 606 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 9,68,876ಕ್ಕೆ ಹಾಗೂ ಮೃತರ ಸಂಖ್ಯೆ 24,915ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ ಶೇ. 63.24ರಷ್ಟು ಅಂದರೆ 6,12,815 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 3,31,146 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.