ನವದೆಹಲಿ: ಭಾರತದಲ್ಲಿ ಕೊರೊನಾ ನಾಗಾಲೋಟ ಮುಂದುವರೆದಿದೆ. ಒಂದೇ ದಿನದಲ್ಲಿ ಸುಮಾರು ಅರ್ಧ ಲಕ್ಷ ಪ್ರಕರಣಗಳು ಪತ್ತೆಯಾಗಿವೆ. ಇತ್ತ ಸಾವಿನ ಸಂಖ್ಯೆ ಕೂಡ 30 ಸಾವಿರದ ಗಡಿ ದಾಟಿ ಮುನ್ನುಗ್ಗುತ್ತಿದೆ.
ದೇಶದಲ್ಲಿ ಒಂದೇ ದಿನ ಅರ್ಧ ಲಕ್ಷ ಕೊರೊನಾ ಸೋಂಕಿತರು ಪತ್ತೆ..! - Health Ministry
ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 12,87,945ಕ್ಕೆ ಹೆಚ್ಚಳಗೊಂಡಿದ್ದರೆ, ಮೃತರ ಸಂಖ್ಯೆ 30,601ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಕೊರೊನಾ ಕೇಸ್ಗಳು
ಕಳೆದ 24 ಗಂಟೆಗಳಲ್ಲಿ ಈವರೆಗೆ ಅತಿ ಹೆಚ್ಚು ಪ್ರಕರಣಗಳು ಎಂಬಂತೆ ಬರೋಬ್ಬರಿ 49,310 ಸೋಂಕಿತರು ಪತ್ತೆಯಾಗಿದ್ದು, 740 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 12,87,945ಕ್ಕೆ ಹಾಗೂ ಮೃತರ ಸಂಖ್ಯೆ 30,601ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 8,17,208 (8.17ಲಕ್ಷ) ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 4,40,135 ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
Last Updated : Jul 24, 2020, 10:41 AM IST