ನವದೆಹಲಿ:ಈ ಬಾರಿ ಮುಂಗಾರು ಮಳೆ ದೇಶದ ಹಲವು ರಾಜ್ಯಗಳಲ್ಲಿ ಕೋಟ್ಯಂತರ ರೂಪಾಯಿ ನಷ್ಟವನ್ನು ಉಂಟು ಮಾಡಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಮೂರು ರಾಜ್ಯಗಳಿಗೆ ಪರಿಹಾರ ಘೋಷಣೆ ಮಾಡಿದೆ.
ಕರುನಾಡಲ್ಲಿ ಮಹಾಪ್ರವಾಹ ಹಿನ್ನೆಲೆ: ಕೊನೆಗೂ ಕೇಂದ್ರದಿಂದ ಪರಿಹಾರ ಬಿಡುಗಡೆ - ಗೃಹ ಸಚಿವ ಅಮಿತ್ ಶಾ
ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕರ್ನಾಟಕ, ಒಡಿಶಾ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳಿಗೆ 4,432.10 ಕೋಟಿ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಕೇಂದ್ರ
ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ಕರ್ನಾಟಕ, ಒಡಿಶಾ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳಿಗೆ 4432.10 ಕೋಟಿ ರೂ. ಪರಿಹಾರ ಘೋಷಣೆ ಮಾಡಲಾಗಿದೆ.
ಅತಿವೃಷ್ಟಿ ಪರಿಣಾಮ ಕರ್ನಾಟಕ ಬಹುತೇಕ ಜಿಲ್ಲೆಗಳಲ್ಲಿ ಮನೆ, ಆಸ್ತಿ-ಪಾಸ್ತಿ ನಾಶವಾಗಿತ್ತು. ಈ ಹಿನ್ನೆಲೆಯಲ್ಲಿ ವಾರದ ಹಿಂದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ತೆರಳಿ ಪ್ರಧಾನಿ ಹಾಗೂ ಗೃಹಸಚಿವರನ್ನು ಭೇಟಿ ಮಾಡಿ ಪರಿಹಾರ ನೀಡುವಂತೆ ಮನವಿ ಮಾಡಿದ್ದರು.