ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತೀವ್ರ ಉಸಿರಾಟದ ತೊಂದರೆಯಿಂದ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗೃಹ ಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲು - Home Minister Amit Shah
ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರ ಉಸಿರಾಟದ ತೊಂದರೆಯಿಂದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗೃಹ ಸಚಿವ ಅಮಿತ್ ಶಾ
ಆಗಸ್ಟ್ 2ರಂದು ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸಚಿವರಿಗೆ 14ರಂದು ನೆಗೆಟಿವ್ ವರದಿ ಬಂದಿತ್ತು. ಆ ಬಳಿಕ ಕೊರೊನಾ ಬಳಿಕದ ಚಿಕಿತ್ಸೆ ಪಡೆದು ಆ.31ರಂದು ಡಿಸ್ಚಾರ್ಜ್ ಆಗಿದ್ದರು. ಆದರೆ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಮತ್ತೆ ಆಸ್ಪತ್ರೆ ಸೇರಿದ್ದಾರೆ.
ವೈದ್ಯಕೀಯ ಮೂಲಗಳ ಪ್ರಕಾರ, 'ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ತಿಳಿದುಬಂದಿದೆ.