ನವದೆಹಲಿ:ಅಂದಿನ ಗೃಹ ಸಚಿವರಾಗಿದ್ದ ಪಿ.ವಿ.ನರಸಿಂಹರಾವ್ ಅವರು ಐಕೆ ಗುಜ್ರಾಲ್ ನೀಡಿದ ಸಲಹೆಯಂತೆ ನಡೆದುಕೊಂಡಿದ್ದರೆ, ಸಿಖ್ ಗಲಭೆಯನ್ನು ತಪ್ಪಿಸಬಹುದಿತ್ತು ಎಂದು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ನಿನ್ನೆ ನವದೆಹಲಿಯಲ್ಲಿ ಆಯೋಜಿಸಲಾಗಿದ್ದ ಐಕೆ ಗುಜ್ರಾಲ್ 100ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 1984ರಲ್ಲಿ ಸಿಖ್ ದುರಂತ ನಡೆದ ದಿನವೇ ಅಂದಿನ ಪ್ರಧಾನಿ ಗುಜ್ರಾಲ್ ಅವರು ನರಸಿಂಹರಾವ್ ಬಳಿ ಪರಿಸ್ಥಿತಿ ಗಂಭೀರವಾಗಿದೆ. ಆದಷ್ಟು ಬೇಗ ಸೇನೆ ವಾಪಸ್ ಕರೆಸಿ ಪರಿಸ್ಥಿತಿ ತಿಳಿಗೊಳಿಸಲು ಸಲಹೆ ನೀಡಿದ್ದರು. ಆದರೆ, ನರಸಿಂಹರಾವ್ ಅವರು ಕಿವಿಗೆ ಹಾಕಿಕೊಂಡಿರಲಿಲ್ಲ ಎಂದು ಹೇಳಿದರು.