ನವದೆಹಲಿ:ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ, ಆಂಫಾನ್ ಪೀಡಿತ ಪಶ್ವಿಮ ಬಂಗಾಳದಲ್ಲಿ ತೆರವು ಕಾರ್ಯಾಚಣೆಯಲ್ಲಿ ಪಾಲ್ಗೊಂಡಿರುವ ಫೋಟೋ ಜೊತೆಯಲ್ಲಿ ಮದ್ಯದ ಬಾಟಲಿಯ ಛಾಯಾಚಿತ್ರವನ್ನು ಕೇಂದ್ರ ಗೃಹ ಇಲಾಖೆ ತನ್ನ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದು ತೀವ್ರ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.
ಫೇಸ್‌ಬುಕ್ ಖಾತೆಯಲ್ಲಿ ಮದ್ಯದ ಬಾಟಲಿ ಫೋಟೋ ಹಂಚಿಕೊಂಡ ಕೇಂದ್ರ ಗೃಹ ಇಲಾಖೆ! - ಕೇಂದ್ರ ಗೃಹ ಇಲಾಖೆ ಲೇಟೆಸ್ಟ್ ನ್ಯೂಸ್
ಕೇಂದ್ರ ಗೃಹ ಇಲಾಖೆಯ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ಮದ್ಯದ ಬಾಟಲಿ ಫೋಟೋವನ್ನು ಪೋಸ್ಟ್ ಮಾಡಿದ್ದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಇಲಾಖೆಯ ಅಧಿಕೃತ ಫೇಸ್‌ಬುಕ್ ಖಾತೆಯನ್ನು ನಿರ್ವಹಿಸುತ್ತಿರುವ ವ್ಯಕ್ತಿಯ ನಿರ್ಲಕ್ಷ್ಯದಿಂದ ತಪ್ಪಾಗಿದೆ ಎಂಬುದು ತಿಳಿದುಬಂದಿದೆ.
ಕೇಂದ್ರ ಗೃಹ ಇಲಾಖೆಯ ಫೇಸ್ಬುಕ್ನಲ್ಲಿ ಮದ್ಯದ ಬಾಟಲಿ
ಕೇಂದ್ರ ಗೃಹ ಇಲಾಖೆಯ ಅಧಿಕೃತ ಫೇಸ್‌ಬುಕ್ ಖಾತೆಯನ್ನು ನಿರ್ವಹಿಸುತ್ತಿರುವ ವ್ಯಕ್ತಿಯ ನಿರ್ಲಕ್ಷ್ಯದಿಂದ ತಪ್ಪಾಗಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.
ಸಚಿವಾಲಯದ ಫೇಸ್‌ಬುಕ್ ಖಾತೆಯನ್ನು ನಿರ್ವಹಿಸುತ್ತಿದ್ದ ವ್ಯಕ್ತಿಯು ಲಿಖಿತವಾಗಿ ಕ್ಷಮೆಯಾಚಿಸಿದ್ದಾರೆ. ಇಂದು ಬೆಳಗ್ಗೆ 9:32ಕ್ಕೆ ಫೋಟೋವನ್ನು ಫೇಸ್‌ಬುಕ್ ಖಾತೆಯಿಂದ ತೆಗೆದುಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಬಗ್ಗೆ ಗೃಹ ಸಚಿವಾಲಯ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ನಿಡಿಲ್ಲ.
Last Updated : May 28, 2020, 4:30 PM IST