ಹೈದರಾಬಾದ್(ತೆಲಂಗಾಣ):ಹೈದರಾಬಾದ್ ಸೇರಿದಂತೆ ರಾಜ್ಯದ ಇತರ ಏಳು ಜಿಲ್ಲೆಗಳು ಹಾಟ್‌ಸ್ಪಾಟ್‌ಗಳಾಗಿರುವುದರಿಂದ ಲಾಕ್ಡೌನ್ಗೆ ವಿನಾಯಿತಿ ಸಿಗುವ ಸಾಧ್ಯತೆ ಕಡಿಮೆ ಇದೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ತೆಲಂಗಾಣ ಸರ್ಕಾರ ಭಾನುವಾರ ಸಚಿವ ಸಂಪುಟ ಸಭೆ ಕರೆದಿದ್ದು, ಲಾಕ್ಡೌನ್ನಲ್ಲಿ ವಿನಾಯಿತಿ ನೀಡುವ ಬಗ್ಗೆ ಚರ್ಚೆ ನಡೆಸಲಿದೆ.
ಕಳೆದ 2 ದಿನಗಳಲ್ಲಿ ತೆಂಗಾಣದಲ್ಲಿ 116 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಇಲ್ಲಿಯವರೆಗೆ 766 ಜನರಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿದೆ. ಹೀಗಾಗಿ ಏಪ್ರಿಲ್ 20ರಿಂದ ಕೆಲ ವಲಯಗಳಲ್ಲಿ ವಿನಾಯಿತಿ ನೀಡುವ ಸಾಧ್ಯತೆ ಕಡಿಮೆ ಇದೆ ಎಂದು ಹೇಳಲಾಗಿದೆ.
ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಮೇ 3ರವರೆಗೆ ಲಾಕ್‌ಡೌನ್ ಕಟ್ಟುನಿಟ್ಟಾಗಿ ಜಾರಿಗೆ ತರಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಕನಿಷ್ಠ ಎರಡು ವಾರಗಳವರೆಗೆ ಲಾಕ್‌ಡೌನ್ ವಿಸ್ತರಣೆ ಕೋರಿದ ನಾಯಕರಲ್ಲಿ ಚಂದ್ರಶೇಖರ್ ರಾವ್ ಕೂಡ ಒಬ್ಬರು. ಪ್ರಧಾನಿ ನರೇಂದ್ರ ಮೋದಿ ಲಾಕ್‌ಡೌನ್ ವಿಸ್ತರಣೆ ಘೋಷಿಸುವ ಮೊದಲೇ ಕೆಸಿಆರ್ ಏಪ್ರಿಲ್ 30ರವರೆಗೆ ರಾಜ್ಯದಲ್ಲಿ ಲಾಕ್‌ಡೌನ್ ಘೋಷಣೆ ಮಾಡಿದ್ದರು.