ಮಥುರಾ (ಉ.ಪ್ರ): ಪಟಾಕಿ ತಯಾರಿಸಲು ಬಳಸುವ ವಸ್ತುಗಳನ್ನು ಸಂಗ್ರಹಿಸಿದ್ದ ಮನೆಯಲ್ಲಿ ಸ್ಫೋಟ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ ದುರ್ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ಸಂಭವಿಸಿದೆ.
ಪಟಾಕಿ ತಯಾರಿಸಲು ಬಳಸುವ ವಸ್ತುಗಳನ್ನು ಸಂಗ್ರಹಿಸಿದ್ದ ಮನೆಯಲ್ಲಿ ಸ್ಫೋಟ: ಓರ್ವ ಸಾವು - ಓರ್ವ ಸಾವು
ಪಟಾಕಿ ತಯಾರಿಸಲು ಬಳಸುವ ವಸ್ತುಗಳನ್ನು ಸಂಗ್ರಹಿಸಿದ್ದ ಮನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹತ್ತಿರದ ಕೆಲ ಮನೆಗಳಿಗೂ ಹಾನಿಯಾಗಿದೆ.

explosion
ಘಟನೆಯಲ್ಲಿ ಹತ್ತಿರದ ಕೆಲ ಮನೆಗಳಿಗೂ ಹಾನಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದೆ.
"ಸ್ಫೋಟ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹತ್ತಿರದ ಮನೆಗಳಿಗೂ ಹಾನಿಯಾಗಿದೆ. ತನ್ನ ನಿವಾಸದಲ್ಲಿ ವಸ್ತುಗಳನ್ನು ಸಂಗ್ರಹಿಸಿದ್ದ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು" ಎಂದು ಮಥುರಾದ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಸುರೇಶ್ ಕುಮಾರ್ ತಿಳಿಸಿದ್ದಾರೆ.