ಕರ್ನಾಟಕ

karnataka

ETV Bharat / bharat

'ಹೌಡಿ ಮೋದಿ' ಕಾರ್ಯಕ್ರಮ: ಭಾರತೀಯ ಚಿತ್ರರಂಗದಿಂದ ಪ್ರಶಂಸೆಗಳ ಸುರಿಮಳೆ - ಪ್ರಧಾನಿ ನರೇಂದ್ರ ಮೋದಿ ಭಾಷಣ

ಅಮೆರಿಕದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆ 'ಹೌಡಿ ಮೋದಿ' ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅನಿವಾಸಿ ಭಾರತೀಯರನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ಭಾರತೀಯ ಚಿತ್ರರಂಗ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್​ ಮಾಡಿ ಹರ್ಷ ವ್ಯಕ್ತಪಡಿಸಿದೆ.

'ಹೌಡಿ ಮೋದಿ' ಕಾರ್ಯಕ್ರಮಕ್ಕೆ ಭಾರತೀಯ ಚಿತ್ರರಂಗದಿಂದ ಪ್ರಶಂಸೆ

By

Published : Sep 23, 2019, 2:47 PM IST

ಹೂಸ್ಟನ್‌: ಅಮೆರಿಕದಲ್ಲಿ ನಡೆದ 'ಹೌಡಿ ಮೋದಿ' ಕಾರ್ಯಕ್ರಮಕ್ಕೆ ಭಾರತೀಯ ಚಿತ್ರರಂಗ ಪ್ರಶಂಸೆ ವ್ಯಕ್ತಪಡಿಸಿದೆ. ಕಾರ್ಯಕ್ರಮದಲ್ಲಿ 50,000 ಕ್ಕೂ ಹೆಚ್ಚು ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ಮೋದಿ ಅವರಿಗೆ ಬಾಲಿವುಡ್​ನ ಹಲವು ನಟ-ನಟಿಯರು ಟ್ವೀಟ್​ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದೆ.

ಖ್ಯಾತ ನಿರ್ದೇಶಕ/ನಿರ್ಮಾಪಕ ಕರಣ್ ಜೋಹರ್,​ ಸಲ್ಮಾನ್ ಖಾನ್, ಅಕ್ಷಯ್ ಕುಮಾರ್, ಅಭಿಷೇಕ್ ಬಚ್ಚನ್​ ಅವರಿಂದ ಹಿಡಿದು ಬಾಲಿವುಡ್​ನ​ ತಾರಾ ಬಳಗ ಮೋದಿ ಅವರನ್ನು ಶ್ಲಾಘಿಸಿದೆ. ಈ ಕ್ಷಣ ದೇಶಕ್ಕೆ ಹೆಮ್ಮೆ ತರುವಂತಹ ಸಮಯ ಎಂದು ಟ್ವೀಟ್​ ಮಾಡಿ ಹರ್ಷ ವ್ಯಕ್ತಪಡಿಸಿದೆ.

ABOUT THE AUTHOR

...view details