ಕರ್ನಾಟಕ

karnataka

ETV Bharat / bharat

ಕೇರಳ ಸಾಮೂಹಿಕ ಅತ್ಯಾಚಾರ ಪ್ರಕರಣ.. ಪತಿ ಸೇರಿದಂತೆ 6 ಜನರ ಬಂಧನ - ಫೊಕ್ಸೊ ಕಾಯ್ದೆಯಡಿಯೂ ಪ್ರಕರಣ

ಸಂತ್ರಸ್ತ ಮಹಿಳೆ ಪೊಲೀಸರನ್ನು ಸಂಪರ್ಕಿಸಿ ಪತಿ ಮತ್ತು ಸ್ನೇಹಿತರ ವಿರುದ್ಧ ದೂರು ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿತ್ತು.

rape

By

Published : Jun 6, 2020, 4:39 PM IST

ತಿರುವನಂತಪುರಂ (ಕೇರಳ) :25 ವರ್ಷದ ಮಹಿಳೆಗೆ ಪತಿ ಮತ್ತು ಆತನ ಸ್ನೇಹಿತರು ಬಲವಂತವಾಗಿ ಮದ್ಯಪಾನ ಮಾಡಿಸಿ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಪತಿ ಸೇರಿ ಆರು ಜನರನ್ನು ಈವರೆಗೂ ಬಂಧಿಸಲಾಗಿದ್ದು, ಇನ್ನೊಬ್ಬ ವ್ಯಕ್ತಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತ ಮಹಿಳೆ ಪೊಲೀಸರನ್ನು ಸಂಪರ್ಕಿಸಿ ಪತಿ ಮತ್ತು ಸ್ನೇಹಿತರ ವಿರುದ್ಧ ದೂರು ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿತ್ತು.

ಪತಿ ಸೇರಿ ಏಳು ಆರೋಪಿಗಳ ವಿರುದ್ಧ ಅಪಹರಣ, ಹಲ್ಲೆ ಮತ್ತು ಸಾಮೂಹಿಕ ಅತ್ಯಾಚಾರದ ಪ್ರಕರಣ ದಾಖಲಿಸಲಾಗಿದೆ. ಈ ಘಟನೆ ಮಹಿಳೆಯ ಮಗುವಿನ ಮುಂದೆ ನಡೆದಾಗಿನಿಂದ, ಫೊಕ್ಸೊ ಕಾಯ್ದೆಯಡಿಯೂ ಪ್ರಕರಣ ದಾಖಲಾಗಿದೆ.

ABOUT THE AUTHOR

...view details