ಕರ್ನಾಟಕ

karnataka

ETV Bharat / bharat

ಕೋವಿಡ್​ನಿಂದ ಸಾವನ್ನಪ್ಪಿದ ಗಂಡ: ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ! - ಹೆಂಡತಿ ಆತ್ಮಹತ್ಯೆ

ಕೋವಿಡ್​ನಿಂದ ಗಂಡ ಸಾವನ್ನಪ್ಪಿದ್ದರಿಂದ ಬೇರೆ ದಾರಿ ಕಾಣದೇ ಹೆಂಡತಿ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

Husband dies of Covid
Husband dies of Covid

By

Published : Jul 8, 2020, 2:46 AM IST

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಿಲಿಗುರಿ ಪಟ್ಟಣದ ಮಹಿಳೆಯೊಬ್ಬಳು ತನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳೊಂದಿಗೆ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ನಡೆದಿದ್ದು, ಸದ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈಕೆಯ ಪತಿ ಶಿಕ್ಷಕನಾಗಿದ್ದು, ಕೊರೊನಾ ವೈರಸ್​ನಿಂದ ಸಾವನ್ನಪ್ಪಿದ್ದಾನೆ. ಅದರಿಂದ ಮನನೊಂದು ಈ ನಿರ್ಧಾರ ಕೈಗೊಂಡಿದ್ದಾಳೆಂದು ತಿಳಿದು ಬಂದಿದೆ.

ರೈಲ್ವೆ ಹಳಿ ಮೇಲೆ ಬಿದ್ದಿರುವ ಕಾರಣ ಮಹಿಳೆ ಮೆದುಳಿನಲ್ಲಿ ರಕ್ತಸ್ರಾವವಾಗಿದ್ದು, ಐದು ವರ್ಷಗಳ ಮಗಳು ಒಂದು ಕೈ ಹಾಗೂ 18 ತಿಂಗಳ ಮಗು ಕಾಲು ಮತ್ತು ಕೈ ಕಳೆದುಕೊಂಡಿದೆ ಎಂದು ತಿಳಿದು ಬಂದಿದೆ. ಸದ್ಯ ಬಂಗಾಳದ ವೈದ್ಯಕೀಯ ಕಾಲೇಜ್​ ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಕೊರೊನಾದಿಂದ 36 ವರ್ಷದ ಶಾಲಾ ಶಿಕ್ಷಕ ಸಾವನ್ನಪ್ಪಿದ್ದು, ಇದರಿಂದ ಮನನೊಂದು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಕೋವಿಡ್​ನೊಂದ ಬಳಲುತ್ತಿದ್ದ ಗಂಡನನ್ನು ಆಸ್ಪತ್ರೆಗೆ ದಾಖಲು ಮಾಡಲು ಹಿಂದೇಟು ಹಾಕಲಾಗಿದ್ದು, ಸೂಕ್ತ ಚಿಕಿತ್ಸೆ ಸಿಗದೇ ಅವರು ಸಾವನ್ನಪ್ಪಿದ್ದಾರೆ ಎಂಬ ಮಾತು ಗಂಭೀರವಾಗಿ ಕೇಳಿ ಬಂದಿದೆ.

ABOUT THE AUTHOR

...view details