ಶ್ರೀಗಂಗಾನಗರ (ರಾಜಸ್ಥಾನ): ಕಂಠಪೂರ್ತಿ ಕುಡಿದು ತಡರಾತ್ರಿ ಮನೆಗೆ ಬಂದ ಗಂಡ ಕಟ್ಟಿಕೊಂಡ ಹೆಂಡತಿ ಹಾಗೂ ಇಬ್ಬರ ಮಕ್ಕಳ ಕೊಲೆ ಮಾಡಿರುವ ಘಟನೆ ರಾಜಸ್ಥಾನದ ಶ್ರೀಗಂಗಾನಗರದಲ್ಲಿ ನಡೆದಿದೆ.
ಕಂಠಪೂರ್ತಿ ಕುಡಿದ ನಶೆಯಲ್ಲಿ ಹೆಂಡತಿ, ಇಬ್ಬರು ಮಕ್ಕಳ ಕೊಲೆಗೈದ ಗಂಡ! ಯಾವ ಕಾರಣಕ್ಕಾಗಿ ಕೊಲೆ ನಡೆದಿದೆ ಎಂಬ ಮಾಹಿತಿ ಇಲ್ಲಿಯವರೆಗೆ ಹೊರಬಿದ್ದಿಲ್ಲ. ರಾತ್ರಿ ಕೊಲೆ ಮಾಡಿ ಮನೆಯಿಂದ ಪರಾರಿಯಾಗಿದ್ದಾನೆ. ಬೆಳಗ್ಗೆ ಯಾರು ಹೊರ ಬಾರದ ಕಾರಣ ಪಕ್ಕದ ಮನೆಯವರು ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಜಸ್ವೀರ್ ಸಿಂಗ್ ಕೊಲೆ ಮಾಡಿರುವ ಆರೋಪಿಯಾಗಿದ್ದು, 11 ವರ್ಷದ ಮಗಳು ಹಾಗೂ 8 ವರ್ಷದ ಮಗ ಕೂಡ ಸಾವನ್ನಪ್ಪಿದ್ದಾರೆ.
ಘಟನೆ ಬಗ್ಗೆ ಮಾಹಿತಿ ಗೊತ್ತಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕಾಗಮಿಸಿ, ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಾತನಾಡಿರುವ ಸ್ಥಳೀಯ ವ್ಯಕ್ತಿ ಪ್ರತಿದಿನ ಕುಡಿದು ಬರುತ್ತಿದ್ದ ವ್ಯಕ್ತಿ ಹೆಂಡತಿ ಹಾಗೂ ಮಕ್ಕಳೊಂದಿಗೆ ಜಗಳವಾಡುತ್ತಿದ್ದನು ಎಂದು ತಿಳಿಸಿದ್ದಾರೆ. ನಿನ್ನೆ ರಾತ್ರಿ ಕೂಡ ಕುಡಿದು ಬಂದು ಜಗಳವಾಡಿದ್ದಾನೆ ಎಂದು ತಿಳಿಸಿದ್ದಾರೆ.
ತಲೆಮರೆಸಿಕೊಂಡಿರುವ ವ್ಯಕ್ತಿಗಾಗಿ ಇದೀಗ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದು, ಪೊಲೀಸ್ ಪ್ರಕರಣ ದಾಖಲು ಮಾಡಿಕೊಂಡಿದ್ದಾಗಿ ಮಾಹಿತಿ ನೀಡಿದ್ದಾರೆ.