ಹೈದರಾಬಾದ್: ಬರೋಬ್ಬರಿ 1.03 ಕೋಟಿ ರೂ. ಮೌಲ್ಯದ ವಿದೇಶಿ ಸಿಗರೇಟ್ ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿರುವ ಹೈದರಾಬಾದ್ ಪೊಲೀಸರು, ಐವರು ಆರೋಪಿಗಳ ಬಂಧನ ಮಾಡಿದ್ದಾರೆ.
1.03 ಕೋಟಿ ರೂ. ಮೌಲ್ಯದ ವಿದೇಶಿ ಸಿಗರೇಟ್ ಸೇರಿ, ಐವರ ಬಂಧನ! - ಐವರ ಬಂಧನ
ಹೈದರಾಬಾದ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಐವರು ಆರೋಪಿಗಳ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
Hyderabad City Police
ಹೈದರಾಬಾದ್ನ ಶಹಿನಾಯತ್ಗಂಜ್ ಪೊಲೀಸರು ಈ ಕಾರ್ಯಾಚರಣೆ ನಡೆಸಿ, ಯಶಸ್ವಿಯಾಗಿದ್ದಾರೆ. ಇಲ್ಲಿನ ಸಿದ್ದಿಯಾ ಬಜಾರ್ ಸಮೀಪದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಆಟೋವೊಂದನ್ನ ತಪಾಸಣೆಗೊಳಪಡಿಸಿದಾಗ ಇಷ್ಟೊಂದು ಮೌಲ್ಯದ ವಿದೇಶಿ ಉತ್ಪನ್ನ ಸಿಕ್ಕಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕ ಸೇರಿದಂತೆ ಐವರನ್ನ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ವಿದೇಶದಿಂದ ಆಮುದು ಮಾಡಿಕೊಂಡು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ಹೊರಬಿದ್ದಿದೆ.