ಹೈದರಾಬಾದ್: ತೆಲಂಗಾಣದ ಮೆಡ್ಚಲ್ ಜಿಲ್ಲೆಯ ಕಾಪ್ರಾ ಸರ್ಕಲ್ನ ರಾಧಿಕಾ ಜಂಕ್ಷನ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಸ್ಕೂಟರ್ ಮೇಲೆ ಪ್ರಯಾಣಿಸುತ್ತಿದ್ದ ಮಹಿಳೆಯೋರ್ವರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.
ಭೀಕರ ರಸ್ತೆ ಅಪಘಾತದಲ್ಲಿ ಹಾರಿಹೋಯ್ತು ಮಹಿಳೆಯ ಪ್ರಾಣಪಕ್ಷಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ - ಸ್ಥಳದಲ್ಲೇ ಮಹಿಳೆ ಸಾವು
ಹೈದರಾಬಾದ್ನಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಅದರ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಭೀಕರ ರಸ್ತೆ ಅಪಘಾತ
ದ್ವಿಚಕ್ರ ವಾಹನದ ಮೇಲೆ ಸವಾರಿ ಮಾಡುತ್ತಿದ್ದ ವೇಳೆ ಏಕಾಏಕಿಯಾಗಿ ಹಿಂಬಂದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಎಸ್ರಾವ್ ನಗರದವರು ಎಂದು ಗುರುತಿಸಲಾಗಿದ್ದು, ಲಾರಿಯ ಮುಂಭಾಗದ ಚಕ್ರ ಮಹಿಳೆಯ ತಲೆಯ ಮೇಲೆ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಂಡ ಪೊಲೀಸರು ಈಗಾಗಲೇ ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಿದ್ದು, ಲಾರಿ ಡ್ರೈವರ್ನನ್ನ ವಶಕ್ಕೆ ಪಡೆದುಕೊಂಡಿದ್ದಾರೆ.