ಹೈದರಾಬಾದ್: ಟ್ರಾಫಿಕ್ ಪೊಲೀಸರೆಂದರೆ ಹೆದರಿ ಡ್ರೈವ್ ಮಾಡುವವರೇ ಹೆಚ್ಚು. ಸಾರ್ವಜನಿಕರು ಹಾಗೂ ಪೊಲೀಸರ ನಡುವೆ ಇರುವ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹೈದರಾಬಾದ್ ಸಂಚಾರ ಪೊಲೀಸ್ ಇಲಾಖೆಯು ಹೊಸ ದಾರಿಯೊಂದನ್ನು ಕಂಡುಕೊಂಡಿದೆ.
ಜವಾಬ್ದಾರಿಯುತ ಸವಾರರಿಗೆ ಪಿವಿಆರ್ ಗೋಲ್ಡ್ ಕ್ಲಾಸ್ ಟಿಕೆಟ್ ಕೊಟ್ಟ ಟ್ರಾಫಿಕ್ ಪೊಲೀಸರು - hyderabad police
ಸಂಚಾರ ನಿಯಮ ಕಟ್ಟುನಿಟ್ಟಾಗಿ ಪಾಲಿಸುವ ಹಾಗೂ ಹೆಲ್ಮೆಟ್ ಧರಿಸಿ ಸಂಚಾರ ಮಾಡುವ ವಾಹನ ಸವಾರರಿಗೆ ಪಿವಿಆರ್ ಗೋಲ್ಡ್ ಕ್ಲಾಸ್ ಟಿಕೆಟ್ ನೀಡುವ ಮೂಲಕ ಹೈದರಾಬಾದ್ ಸಂಚಾರ ಪೊಲೀಸರು ವಾಹನ ಸವಾರರನ್ನು ಗೌರವಿಸಿದೆ.
hyderabad police gifted movie tickets
ಹೆಲ್ಮೆಟ್ ಧರಿಸಿ ಸಂಚಾರ ಮಾಡುವ ವಾಹನ ಸವಾರರಿಗೆ ಪಿವಿಆರ್ ಗೋಲ್ಡ್ ಕ್ಲಾಸ್ ಟಿಕೆಟ್ ನೀಡುವ ಮೂಲಕ ಅವರನ್ನು ಗೌರವಿಸಿದೆ.
ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ, ವಾಹನ ದಾಖಲೆ, ಡಿಎಲ್ ಎಲ್ಲವನ್ನೂ ಸರಿಯಾಗಿ ನಿರ್ವಹಿಸಿರುವ ವಾಹನ ಸವಾರರನ್ನು ಗುರುತಿಸಿ ಅವರಿಗೆ ಟಿಕೆಟ್ಗಳನ್ನು ನೀಡಲಾಗಿದೆ. ಸಂಚಾರ ಪೊಲೀಸರ ಈ ಕ್ರಮದ ಬಗ್ಗೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ. ಟ್ವಿಟರ್ನಲ್ಲೂ ಈ ಕುರಿತು ಚರ್ಚೆ ನಡೆಯುತ್ತಿದೆ.