ಹೈದರಾಬಾದ್:ಪಶುವೈದ್ಯೆ ಅತ್ಯಾಚಾರ ಮತ್ತು ಬರ್ಬರ ಕೊಲೆ ಸಂಬಂಧ ನಾಲ್ವರು ಆರೋಪಿಗಳನ್ನು ಸೈಬರಾಬಾದ್ ಪೊಲೀಸರು ಎನ್ಕೌಂಟರ್ ಮಾಡಿ ಮುಗಿಸಿರುವುದಕ್ಕೆ ಹೈದರಾಬಾದ್ ಸಂಸದ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ವಿರೋಧ ವ್ಯಕ್ತಪಡಿಸಿದ್ದಾರೆ.
ಪೊಲೀಸ್ ಎನ್‌ಕೌಂಟರ್‌ಗಳಿಗೆ ನನ್ನ ವಿರೋಧವಿದೆ: ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ - ಪಶುವೈದ್ಯೆ ಅತ್ಯಾಚಾರ ಮತ್ತು ಕೊಲೆ
ಪಶುವೈದ್ಯೆ ಅತ್ಯಾಚಾರ ಪ್ರಕರಣದ ನಾಲ್ವರು ಆರೋಪಿಗಳನ್ನು ಎನ್ಕೌಂಟರ್ ನಡೆಸಿ ಹತ್ಯೆಗೈದ ತೆಲಂಗಾಣ ಪೊಲೀಸರ ಕ್ರಮಕ್ಕೆ ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ ವಿರೋಧ ವ್ಯಕ್ತಪಡಿಸಿದ್ದಾರೆ.
ಅಸಾದುದ್ದೀನ್ ಓವೈಸಿ ವಿರೋಧ
ಸುದ್ದಿಗಾರರೊಂದಿಗೆ ಮಾತನಾಡಿರುವ ಸಂಸದ, ಪೊಲೀಸ್ ಎನ್‌ಕೌಂಟರ್‌ಗಳಿಗೆ ನನ್ನ ವಿರೋಧವಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಈಗಾಗಲೇ ಪೊಲೀಸರಿಗೆ ನೋಟಿಸ್ ಕಳುಹಿಸಿದೆ ಎಂದು ತಿಳಿಸಿದ್ರು.