ನವದೆಹಲಿ: ಆಂಧ್ರಪ್ರದೇಶದ ವಿಶಾಖಪಟ್ಟಣಂದಲ್ಲಿ ಕಳೆದ ರಾತ್ರಿ ನಡೆದ ವಿಷಾನಿಲ ಸೋರಿಕೆ ದುರ್ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಇದರ ಜೊತೆಗೆ ಕೇಂದ್ರ ಗೃಹ ಇಲಾಖೆ ಅಧಿಕಾರಿಗಳು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಅಧಿಕಾರಿಗಳ ಜೊತೆಗೂ ಮಾತನಾಡಿ ದುರ್ಘಟನೆ ಸಂಭವಿಸಿದ ಸ್ಥಳದಲ್ಲಿ ಸದ್ಯದ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದು, ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.
ಅನಿಲ ದುರಂತ: ಆಂಧ್ರ ಸಿಎಂಗೆ ಪ್ರಧಾನಿ ಕರೆ, ಅಗತ್ಯ ನೆರವಿನ ಭರವಸೆ, NDMA ಅಧಿಕಾರಿಗಳ ಜೊತೆ ಸಭೆ - ವೈಜಾಗ್ ಗ್ಯಾಸ್ ಲೀಕ್
ಆಂಧ್ರಪ್ರದೇಶದ ವೈಝಾಗ್ನಲ್ಲಿ ನಡೆದಿರುವ ಭೀಕರ ಅನಿಲ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ಕೇಂದ್ರದಿಂದ ಎಲ್ಲಾ ರೀತಿಯ ಅಗತ್ಯ ನೆರವು ನೀಡುವುದಾಗಿ ತಿಳಿಸಿದ್ದಾರೆ.
modi
ಇದೇ ವೇಳೆ ವಿಶಾಖಪಟ್ಟಣಂನಲ್ಲಿ ಜನರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Last Updated : May 7, 2020, 11:00 AM IST