ನವದೆಹಲಿ:ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿ 1 ಲಕ್ಷ ರೂ ದೇಣಿಗೆ ನೀಡಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ಪತ್ನಿ ಸಾಕ್ಷಿ ಸಿಂಗ್ ಧೋನಿ ಇದೀಗ ಸ್ಪಷ್ಟನೆ ನೀಡಿದ್ದಾರೆ.
ವಾರ್ಷಿಕ ಆದಾಯ 800 ಕೋಟಿ ಇದ್ದರೂ 1 ಲಕ್ಷ ರೂ. ದೇಣಿಗೆ ನೀಡಿ ಟ್ರೋಲ್ಗೊಳಗಾದ ಧೋನಿ!
ಮಹೇಂದ್ರ ಸಿಂಗ್ ಧೋನಿ ಪುಣೆಯ ಸಾರ್ವಜನಿಕ ಚಾರಿಟಬಲ್ ಟ್ರಸ್ಟ್ ಮುಕುಲ್ ಮಾಧವ್ ಫೌಂಡೇಶನ್‌ಗೆ 1 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ ಎಂಬ ಸುದ್ದಿ ಎಲ್ಲಡೆ ಹಬ್ಬಿತ್ತು. ಇದೇ ವಿಚಾರವನ್ನಿಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಅವರ ಕಾಲೆಳೆಯುವ ಕೆಲಸ ಮಾಡಿದ್ದರು. ವಾರ್ಷಿಕವಾಗಿ 800 ಕೋಟಿ ರೂಪಾಯಿ ಹಣಗಳಿಕೆ ಮಾಡುವ ಧೋನಿ ಕೇವಲ 1 ಲಕ್ಷ ರೂಪಾಯಿ ದೇಣಿಗೆ ನೀಡಿದ್ರಾ ಎಂದು ಅನೇಕರು ಅವರನ್ನ ಟ್ರೋಲ್ ಮಾಡಿದ್ದರು.
ಇದೇ ವಿಷಯವನ್ನಿಟ್ಟುಕೊಂಡು ಟ್ವೀಟ್ ಮಾಡಿರುವ ಸಾಕ್ಷಿ ಸಿಂಗ್, ನನ್ನ ಗಂಡ ಯಾವುದೇ ದೇಣಿಗೆ ನೀಡಿಲ್ಲ. ಇಂತಹ ಸೂಕ್ಷ್ಮ ವಿಚಾರದಲ್ಲಿ ಸುಳ್ಳು ಸುದ್ದಿಗಳನ್ನು ನೀಡುತ್ತಿರುವುದನ್ನು ನಿಲ್ಲಿಸಬೇಕು ಎಂದು ನಾನು ಎಲ್ಲ ಮಾಧ್ಯಮ ಸಂಸ್ಥೆಗಳಿಗೆ ಮನವಿ ಮಾಡಿಕೊಳ್ಳುತ್ತೇನೆ. ನಿಮಗೆ ನಾಚಿಕೆಯಾಗಬೇಕು! ಜವಾಬ್ದಾರಿಯುತ ಪತ್ರಿಕೋದ್ಯಮ ಎಲ್ಲಿ ಕಣ್ಮರೆಯಾಯಿತು ಎಂದು ನಾನು ಆಶ್ಚರ್ಯಪಡುತ್ತಿದ್ದೇನೆ ಎಂದು ಟ್ವೀಟಿಸಿದ್ದಾರೆ.