ನವದೆಹಲಿ: ಭಾರತದಲ್ಲಿ ಸಂಶೋಧನೆಯಲ್ಲಿರುವ ಪ್ರಥಮ ಕೋವಿಡ್ ಲಸಿಕೆ 'ಕೊವಾಕ್ಸಿನ್'ನ ಕ್ಲಿನಿಕಲ್ ಪ್ರಯೋಗದ ಫಲಿತಾಂಶವನ್ನು ಆಗಸ್ಟ್ 15ರ ಒಳಗಾಗಿ ಬಿಡುಗಡೆ ಮಾಡುವಂತೆ ಕೋರಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಡಿಜಿ ಬಲರಾಮ್ ಭಾರ್ಗವ ಅವರು ಭಾರತ್ ಬಯೋಟೆಕ್ ಮತ್ತು ವೈದ್ಯಕೀಯ ಕಾಲೇಜುಗಳ ಪ್ರಧಾನ ತನಿಖಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾಗೆ ಈವರೆಗೆ ಯಾವುದೇ ಪ್ರತ್ಯೇಕ ಲಸಿಕೆ ಕಂಡು ಹಿಡಿಯಲಾಗಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಭಾರತದಲ್ಲಿ ಭಾರತ್ ಬಯೋಟೆಕ್, ಐಸಿಎಂಆರ್, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಸಹಯೋಗದೊಂದಿಗೆ ಕೊವಾಕ್ಸಿನ್ ಲಸಿಕೆ ಕಂಡು ಹಿಡಿಯಲಾಗಿದೆ.