ಕರ್ನಾಟಕ

karnataka

ETV Bharat / bharat

ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿಧ್ವಂಸಕ ಕೃತ್ಯ ವಿಫಲಗೊಳಿಸಿದ ಸೇನೆ

ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಉಗ್ರರು ಅಡಗಿಸಿಟ್ಟಿದ್ದ ಸುಧಾರಿತ ಸ್ಫೋಟಕವನ್ನು ಸೇನೆ, ಪೊಲೀಸರು ಪತ್ತೆ ಹಚ್ಚಿ ನಿಷ್ಕ್ರಿಯಗೊಳಿಸಿದ್ದಾರೆ.

ied-detected-and-defused-in-j-and-ks-kupwara-district
ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿಧ್ವಂಸಕ ಕೃತ್ಯಕ್ಕೆ ಯತ್ನ ; ಸೇನೆ, ಪೊಲೀಸರಿಂದ ಐಇಡಿ ನಿಷ್ಕ್ರೀಯ

By

Published : Sep 7, 2020, 1:12 PM IST

ಕುಪ್ವಾರ (ಜಮ್ಮು ಮತ್ತು ಕಾಶ್ಮೀರ):ಗಡಿಯಲ್ಲಿ ಉಗ್ರರ ವಿಧ್ವಂಸಕ ಕೃತ್ಯವನ್ನು ಭಾರತೀಯ ಸೇನೆ ಮತ್ತು ಪೊಲೀಸರು ವಿಫಲಗೊಳಿಸಿದ್ದು, ಕುಪ್ವಾರ ಜಿಲ್ಲೆಯಲ್ಲಿ ಸುಧಾರಿತ ಸ್ಫೋಟಕ ಸಾಧನ ಐಇಡಿಯನ್ನು ಇಂದು ಮುಂಜಾನೆ ಪತ್ತೆ ಹಚ್ಚಿರುವ ಪೊಲೀಸರು ಅದನ್ನು ವಿಫಲಗೊಳಿಸಿದ್ದಾರೆ. ಆ ಮೂಲಕ ಸಂಭವಿಸಬಹುದಾಗಿದ್ದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಜಮ್ಮು-ಕಾಶ್ಮೀರ ಪೊಲೀಸರು, ಕುಪ್ವಾರ ಜಿಲ್ಲೆಯ ಅರಾಂಪೊರಾ ಪ್ರದೇಶದಲ್ಲಿ ಇಂದು ಬೆಳಗ್ಗೆ ಉಗ್ರರು ಅಡಗಿಸಿಟ್ಟಿದ್ದ ಐಇಡಿ ಸ್ಫೋಟಕವನ್ನು ಪತ್ತೆ ಹಚ್ಚಿದ್ದೇವೆ. ಬಾಂಬ್‌ ಪತ್ತೆ ಹಚ್ಚುವ ದಳವನ್ನು ಕರೆಸಿ ಅದನ್ನು ಯಶಸ್ವಿಯಾಗಿ ನಿಷ್ಕ್ರಿಯಗೊಳಿಸಿದ್ದೇವೆ ಎಂದಿದ್ದಾರೆ.

ABOUT THE AUTHOR

...view details